HomeCrimeShocking News: ಬಸ್ ಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ

Shocking News: ಬಸ್ ಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ

ತನ್ನ ಊರಿಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ನರ್ಸ್ ಒಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ವಿಜಯಪುರದಲ್ಲಿ ನಡೆದಿದೆ.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಜನವರಿ 17ರಂದು ರಾತ್ರಿ ಒಂದು ಗಂಟೆ ಸುಮಾರಿಗೆ 22 ವರ್ಷದ ಈ ಯುವತಿ ಇಂಡಿಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಮೂವರು ಎಲ್ಲಿಗೆ ಹೋಗಬೇಕು ಎಂದು ಕೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಇಂಡಿಗೆ ಹೋಗುವ ಬಸ್ ಇಲ್ಲಿಗೆ ಬರುವುದಿಲ್ಲ. ಸೆಟಲೈಟ್ ಬಸ್ ನಿಲ್ದಾಣದಲ್ಲಿ ನಿಮಗೆ ಬಸ್ ಸಿಗುತ್ತದೆ. ಅಲ್ಲಿಗೆ ಡ್ರಾಪ್ ಮಾಡುತ್ತೇವೆ ಎಂದು ಅವರನ್ನು ಪುಸಲಾಯಿಸಿ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ನಂತರ ಮೂವರ ಪೈಕಿ ಒಬ್ಬ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದ್ದು, ಇನ್ನುಳಿದ ಇಬ್ಬರು ಆತನಿಗೆ ಸಹಕರಿಸಿದ್ದಾರೆ. ಕೃತ್ಯದ ಬಳಿಕ ಅವರುಗಳು ಪರಾರಿಯಾಗಿದ್ದು, ಮೂರ್ಚೆ ಹೋಗಿದ್ದ ಯುವತಿಯನ್ನು ಬೆಳಿಗ್ಗೆ ನೋಡಿದ ಕೆಲವರು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular