ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಸ್ಟಾಫ್ ನರ್ಸ್ ಓರ್ವರನ್ನು ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. 39 ವರ್ಷದ ಮಮತಾ ಕೊಲೆಯಾಗಿರುವ ನರ್ಸ್. ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಮತಾ, ತನ್ನ ಸ್ನೇಹಿತೆ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಡಿಸೆಂಬರ್ 24ರಂದು ಸ್ನೇಹಿತೆ ಊರಿಗೆ ಹೋಗಿದ್ದಳು. ಈ ವೇಳೆ ಅಂದು ರಾತ್ರಿಯೇ ಮನೆಯಲ್ಲಿ ಮಮತಾಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾಗಿರುವ ಮಮತಾಗೆ ಮದುವೆಯಾಗಿರಲಿಲ್ಲ ಎಂದು ತಿಳಿದುಬಂದಿದೆ. ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿ ಪತ್ತೆಗಾಗು ಬಲೆ ಬೀಸಲಾಗಿದೆ.

