HomeKarnatakaನರ್ಸಿಂಗ್ ಕೋರ್ಸ್ ಗೆ 1315 ಸೀಟುಗಳ ಸೇರ್ಪಡೆ: ವಿಶೇಷ ಕೌನ್ಸೆಲಿಂಗ್

ನರ್ಸಿಂಗ್ ಕೋರ್ಸ್ ಗೆ 1315 ಸೀಟುಗಳ ಸೇರ್ಪಡೆ: ವಿಶೇಷ ಕೌನ್ಸೆಲಿಂಗ್

ಬೆಂಗಳೂರು: ರಾಜ್ಯ ಸರ್ಕಾರ ಹೊಸದಾಗಿ 37 ನರ್ಸಿಂಗ್ ಕಾಲೇಜುಗಳಿಗೆ ಮಂಜೂರಾತಿ ನೀಡಿದ್ದು, 1315 ಸೀಟುಗಳನ್ನು ಸೇರ್ಪಡೆ ಮಾಡಲಾಗಿದೆ. ಈ ಸೀಟುಗಳ ಹಂಚಿಕೆಗೆ ವಿಶೇಷ ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಕುರಿತದ ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಸಕ್ತರು ಅಕ್ಟೋಬರ್ 28ರಿಂದ 29ರ ಮಧ್ಯಾಹ್ನ 12 ಗಂಟೆಯವರೆಗೆ ಕಾಲೇಜು ಸೀಟುಗಳ ಆಯ್ಕೆ ದಾಖಲಿಸಬಹುದು. ಅದೇ ಸಂಜೆ 6 ಗಂಟೆಗೆ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ದೊರೆತವರು ಅಕ್ಟೋಬರ್ 30ರೊಳಗೆ ಸಂಬಂಧಿಸಿದ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular