HomeKarnatakaBIG NEWS: ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಪ್ರಕರಣ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

BIG NEWS: ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಪ್ರಕರಣ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದ ಬಹುತೇಕ ನರ್ಸಿಂಗ್ ಕಾಲೇಜುಗಳಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ವೆಲ್ಫೇರ್ ಅಸೋಸಿಯೇಷನ್ ಆಫ್ ಪ್ರೊಫೇಷನಲ್ ಸ್ಕಾಲರ್ ಇನ್ ಇಂಡಿಯಾ (ವಾಪಸಿ) ಅಧ್ಯಕ್ಷ, ಕೇರಳದ ಸಾಮಾಜಿಕ ಕಾರ್ಯಕರ್ತ ಎಂ.ಕೆ.ಥಾಮಸ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಾಜೀವ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ, ಕರ್ನಾಟಕ ನರ್ಸಿಂಗ್ ಕೌನ್ಸಿಲ್, ಇಂಡಿಯನ್ ನರ್ಸಿಂಗ್ ಕೌನ್ಸಿಲ್ ಗೆ ನೋಟಿಸ್ ಜಾರಿ ಮಾಡಿದೆ.

ಅಲ್ಲದೇ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ನಿರ್ಧರಿಸಿ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular