ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! ‘ಜಾರಿದವರ ಯತ್ನ ಬೆಲ್ಲ’ ಆಗ್ಲಿಲ್ಲವಲ್ಲಪ್ಪ..! ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿಯಲ್ಲಿ ಅಸಮಾಧನಗೊಂಡಿರುವ ನಾಯಕರ ಕುರಿತು ಕಾಂಗ್ರೆಸ್ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಎಕ್ಸ್ ನಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಅಂತ ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ, ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! ‘ಜಾರಿದವರ ಯತ್ನ ಬೆಲ್ಲ’ ಆಗ್ಲಿಲ್ಲವಲ್ಲಪ್ಪ..! ಎಂದು ವ್ಯಂಗ್ಯವಾಡಿದೆ.

ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ!  ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು, ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು,ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು,ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ  ಕೂರಿಸಲಾಗಿತ್ತು,ಈಗ ಸಿಎಂ ಆಗಿದ್ದ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ, ಇದೇ ಮಾದರಿಯಲ್ಲಿ ವಿಜಯೇಂದ್ರ ಕೂಡ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಅಷ್ಟೇ ಎಂದು ಟ್ವೀಟ್ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read