HomeIndiaಸಿಎಂ ಸ್ಟಾಲಿನ್ ಭೇಟಿಯಾದ ದಿ. ಜಯಲಲಿತಾ ಪರಮಾಪ್ತ, ಏನಿದು ಹೊಸ ಲೆಕ್ಕಾಚಾರ?

ಸಿಎಂ ಸ್ಟಾಲಿನ್ ಭೇಟಿಯಾದ ದಿ. ಜಯಲಲಿತಾ ಪರಮಾಪ್ತ, ಏನಿದು ಹೊಸ ಲೆಕ್ಕಾಚಾರ?

ತಮಿಳುನಾಡಿನ ಮೂರು ಬಾರಿಯ ಮುಖ್ಯಮಂತ್ರಿ, ದಿ.ಜಯಲಲಿತಾ ಪರಮಾಪ್ತ ನಾಯಕ ಒ.ಪನ್ನೀರ್ ಸೆಲ್ವಂ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಭೇಟಿಯಾದರು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರುವಾಗುತ್ತಿರುವಾಗಲೇ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ತಮಿಳುನಾಡು ರಾಜ್ಯದಲ್ಲಿ ದಿ.ಜಯಲಲಿತಾ ನೇತೃತ್ವದ ಎಐಎಡಿಎಂಕೆ ಒಡೆದು ಚೂರಾಗಿದೆ. ಕೆಲವು ದಿನಗಳ ಹಿಂದೆ ಒ.ಪನ್ನೀರ್ ಸೆಲ್ವಂ ಪಕ್ಷದಿಂದ ಉಚ್ಚಾಟನೆಗೊಂಡಿದ್ದಾರೆ. ಈಗ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿದೆ.

ಒ.ಪನ್ನೀರ್ ಸೆಲ್ವಂ ಮತ್ತು ಸಿಎಂ ಎಂ.ಕೆ.ಸ್ಟಾಲಿನ್ ಭೇಟಿ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸ್ಟಾಲಿನ್ ಭೇಟಿ ಬಳಿಕ ಒ.ಪನ್ನೀರ್ ಸೆಲ್ವಂ, “ಆಡಳಿತಾರೂಢ ಡಿಎಂಕೆ ಅಧಿಕಾರವನ್ನು ಉಳಿಸಿಕೊಳ್ಳುವ ಅವಕಾಶ ಹೊಂದಿದೆ” ಎಂದು ಹೇಳುವ ಮೂಲಕ ಚರ್ಚೆಗೆ ಕಾರಣವಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪನ್ನೀರ್‌ ಸೆಲ್ವಂ ಮತ್ತು ಸ್ಟಾಲಿನ್ ಭೇಟಿ ಇದೇ ಮೊದಲಲ್ಲ. ಸುಮಾರು 7 ತಿಂಗಳ ಹಿಂದೆ ಅಡ್ಯಾರ್‌ನ ಥಿಯಾಸೊಫಿಕಲ್ ಸೊಸೈಟಿಯಲ್ಲಿ ಸ್ಟಾಲಿನ್ ಮುಂಜಾನೆಯ ವಾಕಿಂಗ್ ಮತ್ತು ಆಳ್ವಾರ್‌ಪೇಟೆಯಲ್ಲಿರುವ ಅವರ ನಿವಾಸದಲ್ಲಿ ಇಬ್ಬರೂ ನಾಯಕರಯ ಭೇಟಿಯಾಗಿದ್ದರು.

ಆ ಸಂದರ್ಭದಲ್ಲಿ ಪನ್ನೀರ್‌ ಸೆಲ್ವಂ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದ್ದರು ಮತ್ತು ಬಿಜೆಪಿಯೊಂದಿಗಿನ ತಮ್ಮ ಸಂಬಂಧವನ್ನು ಕಡಿದುಕೊಂಡಿದ್ದರು. ಆಗ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಬಿಜೆಪಿ ಜೊತೆ ಚುನಾವಣಾ ಮೈತ್ರಿ ಮಾಡಿಕೊಂಡಿತ್ತು.

ಪನ್ನೀರ್‌ಸೆಲ್ವಂ 5 ವರ್ಷಗಳ ಡಿಎಂಕೆ ಸರ್ಕಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಎಂ.ಕೆ.ಸ್ಟಾಲಿನ್ ಅವರನ್ನು ಅಭಿನಂದಿಸಿದರು. “ಕಳೆದ 5 ವರ್ಷಗಳಲ್ಲಿನ ಈ ಆಡಳಿತದ ಸಾಧನೆಗಳು ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿವೆ ಎಂಬುದು ಸಾರ್ವತ್ರಿಕ ಅಭಿಪ್ರಾಯವಾಗಿದೆ” ಎಂದರು.

ಮತ್ತೊಂದು ಕಡೆ ಪನ್ನೀರ್‌ಸೆಲ್ವಂ ಬೆಂಬಲಿಗ ಶಾಸಕ ಪಿ. ಅಯ್ಯಪ್ಪನ್ ಸದನದಲ್ಲಿ, “ಮಾಜಿ ಮುಖ್ಯಮಂತ್ರಿಗಳಾದ ಎಂ.ಜಿ. ರಾಮಚಂದ್ರನ್ ಮತ್ತು ಜಯಲಲಿತಾ ಅವರ ಆಶೀರ್ವಾದದೊಂದಿಗೆ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರಲಿದೆ” ಎಂದು ನೀಡಿದ್ದರು.

ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಪನ್ನೀರ್‌ಸೆಲ್ವಂ, “ಅಯ್ಯಪ್ಪನ್ ತಮಿಳುನಾಡಿನ ಜನರ ಅಭಿಪ್ರಾಯವನ್ನೇ ಪ್ರತಿಬಿಂಬಿಸಿದ್ದಾರೆ” ಎಂದು ಹೇಳಿದರು.

ತಮಿಳುನಾಡು ವಿಧಾನಸಭಾ ಚುನಾವಣೆ 2026ರ ತಯಾರಿ ಆರಂಭವಾಗಿದೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್ ಅಂತ್ಯ ಅಥವ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್‌ನಲ್ಲಿ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ.

ರಾಜ್ಯದ ಹಾಲಿ ಆಡಳಿತ ಪಕ್ಷ ಡಿಎಂಕೆಯಾಗಿದ್ದು, ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿ. ಡಿಎಂಕೆ ನೇತೃತ್ವದ ಎಸ್‌ಪಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್, ಭಾರತೀಯ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (CPI-M), ಭಾರತೀಯ ಕಮ್ಯುನಿಸ್ಟ್ ಪಕ್ಷ (CPI) ಮತ್ತು ವಿಡುದಲೈ ಚಿರುತ್ತೈಗಳ್ ಕಚ್ಚಿ (VCK) ಪಕ್ಷಗಳಿವೆ.

ವಿರೋಧ ಪಕ್ಷವಾದ ಎಐಎಡಿಎಂಕೆ ಎನ್‌ಡಿಎ ಮೈತ್ರಿಕೂಟದಲ್ಲಿದ್ದು, ಬಿಜೆಪಿ ಜೊತೆ ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಲಿದೆ. ನಟ ವಿಜಯ್ ಟಿವಿಕೆ ಪಕ್ಷ ಸ್ಥಾಪನೆ ಮಾಡುವ ಮೂಲಕ ಮೊದಲ ಬಾರಿಗೆ ರಾಜ್ಯದ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular