HomeKarnatakaಸೇನೆ ಸೇರಿ ಇತರೆ ಸೇವೆ ಸೇರುವ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ಸೇನೆ ಸೇರಿ ಇತರೆ ಸೇವೆ ಸೇರುವ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಅಭ್ಯರ್ಥಿಗಳಿಗೆ  ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.

ತರಬೇತಿಗಾಗಿ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ನಿಂದ ಪಡೆಯಬಹುದು. ದೂ.ಸಂ: ದಕ್ಷಿಣ ಕನ್ನಡ ಜಿಲ್ಲೆ: ದೂ.ಸಂ. 0824-2225078, ಉಡುಪಿ ಜಿಲ್ಲೆ -0820-2574881, ಉತ್ತರ ಕನ್ನಡ ಜಿಲ್ಲೆ: ದೂ.ಸಂ. 08382-226589 ಅನ್ನು ಸಂಪರ್ಕಿಸಬಹುದೆಂದು ದಾವಣಗೆರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular