ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಇಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಠಾಣಾ ವ್ಯಾಪ್ತಿಯಲ್ಲಿರುವ ಫ್ಲೆಕ್ಸ್ ಮತ್ತು ಬ್ಯಾನರ್ ನ ಪ್ರಿಂಟರ್ಸ್ ಗಳ ಮಾಲೀಕರ ಸಭೆ ನಡೆಸಿ ವಿವಿಧ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.
ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ಪ್ರಿಂಟ್ ಮಾಡುವ ಪ್ರಿಂಟರ್ಸ್ ರವರು ಅವರಿಗೆ ಪ್ರಿಂಟ್ ಹಾಕಲು ಹೇಳಿದವರ ಹೆಸರು ಮತ್ತು ದೂರವಾಣಿ ಸಂಖ್ಯೆ ಹಾಗೂ ಫ್ಲೆಕ್ಸ್ ಪ್ರಿಂಟ್ ಮಾಡಿಕೊಡುತ್ತಿರುವ ಪ್ರಿಂಟರ್ಸ್ ರವರ ಹೆಸರು ಮತ್ತು ದೂರವಾಣಿ ಸಂಖ್ಯೆಗಳನ್ನು ಕಡ್ಡಾಯವಾಗಿ ಆಯಾ ಫ್ಲೆಕ್ಸ್ ಮತ್ತು ಬ್ಯಾನರ್ ಗಳ ಮೇಲೆ ನಮೂದು ಮಾಡಬೇಕಿದೆ.
ಫ್ಲೆಕ್ಸ್ ಮತ್ತು ಬ್ಯಾನರ್ ಗಳಲ್ಲಿ ಯಾವುದೇ ಕಾರಣಕ್ಕೂ ಇತರ ಭಾವನೆಗಳಿಗೆ ಧಕ್ಕೆಯಾಗುವಂತಹ ಮತ್ತು ಆಕ್ಷೇಪಾರ್ಹ ಮಾಹಿತಿ / ಚಿತ್ರಗಳನ್ನು ಪ್ರಿಂಟ್ ಮಾಡಿಕೊಡಬಾರದು ಮತ್ತು ಪ್ರಿಂಟ್ ಮಾಡಿಕೊಡುತ್ತಿರುವ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನುಗಳ Soft Copy ಯನ್ನು ಸರಹದ್ದಿನ ಪೊಲೀಸ್ ಠಾಣೆಗೆ ನೀಡಬೇಕು.
ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ಪ್ರಿಂಟ್ ಮಾಡುಲು ಕೊಡುವವರ ಹೆಸರು, ದೂರವಾಣಿ ಸಂಖ್ಯೆ, ವಿಳಾಸದ ವಿವರಗಳನ್ನು ರಿಜಿಸ್ಟರ್ ನಲ್ಲಿ ನಮೂದಿಸಬೇಕು ಮತ್ತು ಅದರ ಮಾಹಿತಿಯನ್ನು ಕಡ್ಡಾಯವಾಗಿ ಸಂಬಂಧಪಟ್ಟ ಸರಹದ್ದಿನ ಪೊಲೀಸ್ ಠಾಣೆಗೆ ಆ ದಿನವೇ ನೀಡಬೇಕು ಎಂದು ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ರವಿ ಪಾಟೀಲ್ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಫ್ಲೆಕ್ಸ್ ಮತ್ತು ಬ್ಯಾನರ್ ಗಳ ಪ್ರಿಂಟರ್ಸ್ ಗಳ ಮಾಲೀಕರು ಉಪಸ್ಥಿತರಿದ್ದರು.
ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆ:
ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಮತ್ತು ಶಿವಮೊಗ್ಗ ನಗರದಲ್ಲಿ ಶಾಂತಿ ಹಾಗೂ ವ್ಯವಸ್ಥೆ ಕಾಪಾಡುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಎಎಸ್‌ಸಿ ತಂಡ, ಶ್ವಾನದಳ, ದ್ರೋಣ್ ಕ್ಯಾಮೆರಾ ತಂಡ ಮತ್ತು ಶಿವಮೊಗ್ಗ ನಗರದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡವು ಶಿವಮೊಗ್ಗ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ.
KSRTC ಬಸ್ ಡಿಪೋ ಸರ್ಕಲ್, ಇಲಿಯಾಸ್ ನಗರದ ಅಯೂಬ್ ಕ್ಯಾಂಟೀನ್ ಬಳಿ, ನ್ಯೂ ಮಂಡ್ಲಿ ಸರ್ಕಲ್, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ, KSRTC ಬಸ್ ನಿಲ್ದಾಣ, ರಿವರ್ ಬೆಡ್ ವಾಕಿಂಗ್ ಪಾತ್ ಸೇರಿದಂತೆ ಇತರೆ ಪ್ರಮುಖ ಸ್ಥಾವರಗಳು, ಸೂಕ್ಷ್ಮ ಪ್ರದೇಶಗಳು ಹಾಗೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಸ್ಥಳಗಳನ್ನು ಪರಿಶೀಲಿಸಿದ್ದಾರೆ.