BREAKING : ಆಕ್ಷೇಪಾರ್ಹ ಹೇಳಿಕೆ : ‘FIR’ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ನಟ ಉಪೇಂದ್ರ

ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆ ದಾಖಲಾದ ಎಫ್ ಐ ಆರ್ (FIR)  ರದ್ದು ಕೋರಿ ನಟ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಲೈವ್ ವಿಡಿಯೋದಲ್ಲಿ ಮಾತನಾಡುವ ವೇಳೆ ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಆಡಿರುವ ಮಾತು ಅವರಿಗೆ ಸಂಕಷ್ಟ ತಂದೊಡ್ಡಿದೆ. ಈ ಸಂಬಂಧ ತಮ್ಮ ವಿರುದ್ಧ ದಾಖಲಾದ ಎಲ್ಲಾ ಎಫ್ ಐ ಆರ್ ಗೆ ಮಧ್ಯಂತರ ತಡೆ ಕೋರಿ ನಟ ಉಪೇಂದ್ರ ಅವರು ಹೈಕೋರ್ಟ್ ಹೊರೆ ಹೋಗಿದ್ದಾರೆ.

ಪರಿಶಿಷ್ಟರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನಟ ರಿಯಲ್ ಸ್ಟಾರ್ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಕೇಸು ದಾಖಲಾಗಿದೆ. ಇದೀಗ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ನಟ ಉಪೇಂದ್ರ ಮನೆಗೆ ವಿವಿಪುರಂ ವಿಭಾಗದ ಎಸಿಪಿ ನಾಗರಾಜ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ನಟ ಉಪೇಂದ್ರ ಮನೆಗೆ ಸಿ.ಕೆ.ಅಚ್ಚುಕಟ್ಟು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂಧನ್ ಅವರು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.ಉಪೇಂದ್ರ ನೀಡಿದ ಹೇಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಪ್ರತಿಭಟನೆ ಕೂಡ ನಡೆಸಲಾಗಿದೆ. ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ದೂರು ಕೂಡ ದಾಖಲಿಸಿವೆ. ಉಪೇಂದ್ರ ಅವರನ್ನು ಬಂಧಿಸಬೇಕೆಂಬ ಒತ್ತಾಯ ಕೂಡ ಕೇಳಿ ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read