ಬೆಂಗಳೂರು : ಬಿಗ್ ಬಾಸ್’ ಮನೆಯಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ‘S’ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ.
ಹಿರಿಯ ವಕೀಲ ಪ್ರಶಾಂತ್ ಮೆತಲ್ ಎಂಬುವವರಯ ಅಶ್ವಿನಿ ಗೌಡ ವಿರುದ್ಧ ಜಾತಿ ನಿಂದನೆ, ವ್ಯಕ್ತಿ ನಿಂದನೆ ಆರೋಪದಡಿ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಕಳೆದವಾರ ಬಿಗ್ ಬಾಸ್ ಮನೆಯಲ್ಲಿ ನಟಿ ಅಶ್ವಿನಿ ಗೌಡ ಮತ್ತು ರಕ್ಷಿತಾ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ರಕ್ಷಿತಾಳಿಗೆ ‘ಎಸ್’ ಕ್ಯಾಟಗರಿ ಅನ್ನೊ ಪದ ಬಳಕೆ ಮಾಡಿದ್ದರು. ಈ ವಿಚಾರ ಭಾರಿ ಚರ್ಚೆಯಾಗಿತ್ತು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧವೂ ದೂರು ದಾಖಲಾಗಿದೆ.
ಇತ್ತೀಚೆಗೆ ನಿಯಮ ಉಲ್ಲಂಘನೆ ಹಿನ್ನೆಲೆ ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಜಾಲಿವುಡ್ ಸ್ಟುಡಿಯೋ ಗೇಟ್ ಗೆ ಬೀಗ ಹಾಕಲಾಗಿತ್ತು. ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿಯಲಾಗಿತ್ತು, ಈ ವಿಚಾರ ಭಾರಿ ಸುದ್ದಿಯಾಗಿತ್ತು. ಹಲವು ಮಹತ್ವದ ಬೆಳವಣಿಗೆಗಳ ಬೆನ್ನಲ್ಲೇ ನಂತರ ಬೀಗ ತೆರೆಯಲಾಗಿತ್ತು.