HomeCrimeBig Breaking: ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದು ಸಾಫ್ಟ್‌ವೇರ್ ಇಂಜಿನಿಯರ್

Big Breaking: ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದು ಸಾಫ್ಟ್‌ವೇರ್ ಇಂಜಿನಿಯರ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್.

ಬಂಧಿತ ಆರೋಪಿಗಳಲ್ಲಿ ನಿತಿನ್ (31) ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಮೂಲತಃ ದಾವಣಗೆರೆಯವನು. ಮತ್ತೊಬ್ಬ ಆರೋಪಿ 45 ವರ್ಷದ ಚಂದ್ರಶೇಖರ್ ಆಟೋ ಚಾಲಕನಾಗಿದ್ದು ಬೆಂಗಳೂರಿನ ಚಿಕ್ಕಬಣಾವರ ನಿವಾಸಿ.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಇತರ ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದಾರೆ. ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ದ ದೂರು ನೀಡಿದ್ದರು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ ಪೊಲೀಸರು ಈ ಪ್ರಕರಣದ ತನಿಖೆಯನ್ನು ಸೈಬರ್ ಕ್ರೈಂ ಪೊಲೀಸರಿಗೆ ವರ್ಗಾವಣೆ ಮಾಡಿದ್ದಾರೆ. ತನಿಖೆ ನಡೆಸಿದ ಪೊಲೀಸರು ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಡಿಸೆಂಬರ್ 24ರಂದು ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದರು. ಅತಿ ಕೆಟ್ಟ ಪದಗಳನ್ನು ಬಳಕೆ ಮಾಡಿಕೊಂಡು ಸುಮಾರು 150 ಕಮೆಂಟ್‌ಗಳನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.

ಸಾಮಾಜಿಕ ಜಾಲತಾಣದ ಕಮೆಂಟ್‌ಗಳಲ್ಲಿ ಕೌಟುಂಬಿಕ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ಮೂಲಕ ಕಮೆಂಟ್‌ಗಳು ಬಂದಿವೆ ಎಂದು ಹೇಳಿದ್ದರು. ಒಂದು ವಾರಗಳ ಕಾಲ ಪರಿಶೀಲನೆ ನಡೆಸಿದ ಪೊಲೀಸರು ಈಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ 2ನೇ ಆರೋಪಿಯಾಗಿದ್ದು ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಡೆವಿಲ್ ಮತ್ತು ಮಾರ್ಕ್ ಚಿತ್ರ ಬಿಡುಗಡೆಯ ಸಮಯದಿಂದ ಸ್ಯಾಂಡಲ್‌ವುಡ್‌ನಲ್ಲಿ ಅಭಿಮಾನಿಗಳ ನಡುವೆ ಫ್ಯಾನ್‌ ವಾರ್‌ ನಡೆಯುತ್ತಿದೆ.

ಈ ಸಂದರ್ಭದಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್‌ಗಳನ್ನು ಮಾಡಲಾಗುತ್ತಿದೆ. ಈ ಕುರಿತು ಸಿಸಿಬಿಗೆ ದೂರು ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮೀ  ಪೊಲೀಸರ ತನಿಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಆದರೆ ಪೊಲೀಸರು ಈಗ ತನಿಖೆ ಚುರುಕುಗೊಳಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ. 3ನೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಹಲವು ಜನರು ಕಮೆಂಟ್‌ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಕೆಲವು ಅಕೌಂಟ್‌ಗಳನ್ನು ಡಿಲೀಟ್, ಇನ್ ಆಕ್ಟೀವ್ ಮಾಡಿದ್ದು, ಅವರ ವಿವರಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ.

ಎರಡು ದಿನಗಳ ಹಿಂದೆ ವಿಜಯಲಕ್ಷ್ಮಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದರು. ತಾವು ಕೊಟ್ಟ ದೂರು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈವರೆಗೂ ಯಾರನ್ನೂ ಕೂಡ ಬಂಧಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದರು.

ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿಯೂ ಪೋಸ್ಟ್ ಹಾಕಿದ್ದರು, “ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೆ. ಆದರೆ ಪ್ರಾಮಾಣಿಕವಾಗಿ, ಈ ಅನುಭವವು ನನ್ನ ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ” ಎಂದು ಪೋಸ್ಟ್ ಹಾಕಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular