HomeLatest NewsBREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ 'ಅಶ್ಲೀಲ ಮೆಸೇಜ್' ಕೇಸ್ : 'CCB' ಯಿಂದ...

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಇಬ್ಬರು ಆರೋಪಿಗಳು ಅರೆಸ್ಟ್.!

ಬೆಂಗಳೂರು : ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಇಬ್ಬರು ಆರೋಪಿಗಳನ್ನು ಸಿಸಿಬಿ ಕ್ರೈಮ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಕಿಡಿಗೇಡಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು, ಇದೀಗ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಅಶ್ಲೀಲ ಪೋಸ್ಟ್ ಗಳನ್ನು ಹಾಕಿದವರ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಸೈಬರ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಭಯ ಬಿದ್ದಿರುವ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿರುವ ತಮ್ಮ ಖಾತೆಗಳನ್ನು ಸ್ಥಗಿತಗೊಳಿಸಿದ್ದರು. ಕೆಲವರು ಕ್ಷಮೆ ಕೇಳಿದ್ದರು. ವಿಜಯಲಕ್ಷ್ಮಿ ವಿರುದ್ಧ ಹಾಕಿದ್ದ ಅಶ್ಲೀಲ ಅವಹೇಳನಕಾರಿ ಸಂದೇಶಗಳನ್ನು ಡಿಲೀಟ್ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಲಕ್ಷ್ಮಿ ಮತ್ತು ಅವರ ಕುಟುಂಬ ಸದಸ್ಯರನ್ನು ನಿಂದಿಸಿ ಜಾಲತಾಣಗಳಲ್ಲಿ 150ಕ್ಕೂ ಹೆಚ್ಚು ಪೋಸ್ಟ್ ಗಳನ್ನು ಹಾಕಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸದ್ಯ ಇಬ್ಬರನ್ನು ಬಂಧಿಸಿರುವ ಪೊಲೀಸರು ಇನ್ನುಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಏನಿದು ಘಟನೆ
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಾತನಾಡಿದ ಸುದೀಪ್, ಯುದ್ಧಕ್ಕೆ ಸಿದ್ಧವಾಗಿದ್ದೇವೆ ಅಂತ ಗುಡುಗಿದ್ದರು. ಐದು ತಿಂಗಳ ಹಿಂದೆ ‘ಮಾರ್ಕ್’ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಅಂತೆಯೇ ನಾವು ಡಿ. 25ರಂದು ಬರುತ್ತಿದ್ದೇವೆ. ಈ ನಡುವೆ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗಿದೆ. ನಾವೂ ರೆಡಿಯಾಗಿದ್ದೇವೆ. ಡಿಸೆಂಬರ್ 25ಕ್ಕೆ ಜೋರಾಗಿ ಬಾಗಿಲು ತಟ್ಟುತ್ತಿದ್ದೇವೆ. ಆದರೆ ಹೊರಗಡೆ ಯುದ್ಧಕ್ಕೆ ಒಂದು ಪಡೆ ರೆಡಿಯಾಗುತ್ತಿದ್ದಾರೆ. ನಾವೂ ಸಿದ್ಧರಿದ್ದೇವೆ ಎಂದು ಸುದೀಪ್ ಹೇಳಿದ್ದರು. ನಂತರ ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಶುರುವಾಗಿತ್ತು.

ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ವಾರ್ ಶುರು ಆಗಿದ್ದು, ಅಭಿಮಾನಿಗಳ ವರ್ತನೆ ಹದ್ದು ಮೀರಿತ್ತು. ಬಳಿಕ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್, ಕಮೆಂಟ್ ಗಳು ಬರಲು ಶುರು ಆಗಿದ್ದು, ವಿಜಯಲಕ್ಷ್ಮಿ ಬೆಂಗಳೂರು ನಗರ ಕಮಿಷನರ್ ಗೆ ದೂರು ಸಲ್ಲಿಸಿದ್ದರು.ಟೀಕಿಸುವವರ ಬಗ್ಗೆ ದರ್ಶನ್ ತಲೆಕೆಡಿಸಿಕೊಳ್ಳುವುದಿಲ್ಲ. ಬೇಜಾರು ಮಾಡಿಕೊಳ್ಳುವುದಿಲ್ಲ. ದರ್ಶನ್ ಅಭಿಮಾನಿಗಳಾದ ನೀವು ಕೂಡ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದರು. ಈ ಎಲ್ಲಾ ಬೆಳವಣಿಗೆಗಳ ಬಳಿಕ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ವರ್ತನೆ ಹದ್ದು ಮೀರುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಕಾದಾಟದಲ್ಲಿ ತೊಡಗಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular