ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘CCB’ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣದ ತನಿಖೆಯ ಭಾಗವಾಗಿ ವಿಜಯಲಕ್ಷ್ಮಿ ದರ್ಶನ್ ಅವರಿಗೆ ನೋಟಿಸ್ ನೀಡಿದ ಪೊಲೀಸರು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಯನ್ನು ಕಡ್ಡಾಯವಾಗಿ ದಾಖಲಿಸಬೇಕು ಎಂದು ಪೊಲೀಸರು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಅವರು ನಗರದ ಸಿಸಿಬಿ ಕ್ರೈಂ ಪೊಲೀಸ್ ಠಾಣೆಯಲ್ಲಿ ಕಳೆದ ಡಿಸೆಂಬರ್ ನಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಪೊಲೀಸರು 8 ಮಂದಿ ಆರೋಪಿಗಳನ್ನ ಬಂಧಿಸಿದ್ದಾರೆ.
ನಟ ದರ್ಶನ್ ಅವರ ಪತ್ನಿವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿ ಕಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಆರೋಪಿಗಳನ್ನು ಸಿಸಿಬಿ ಕ್ರೈಮ್ ವಿಭಾಗದ ಪೊಲೀಸರು ಬಂಧಿಸಿದ್ದರು.ಕಿಡಿಗೇಡಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು, ನಂತರ ಪೊಲೀಸರು 8 ಮಂದಿ ಆರೋಪಿಗಳನ್ನ ಬಂಧಿಸಿದ್ದರು.

