1200 ಚದರಡಿಗಿಂತ ಹೆಚ್ಚು ವಿಸ್ತೀರ್ಣದಲ್ಲಿ ಕಟ್ಟಿದ ಕಟ್ಟಡಕ್ಕೂ ಓಸಿ ವಿನಾಯಿತಿ: ವಿದ್ಯುತ್ ಸಂಪರ್ಕ ಪಡೆಯಲು ಅನುಕೂಲ

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ 1200 ಚದರಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ(ಓಸಿ) ಪಡೆಯುವುದರಿಂದ ವಿನಾಯಿತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಎಸ್ಕಾಂಗಳು ವಿದ್ಯುತ್ ಸಂಪರ್ಕ ಪಡೆಯಲು ಓಸಿ ಕಡ್ಡಾಯ ಮಾಡಿದ್ದವು. ಆದರೆ ನಕ್ಷೆ ಮಂಜೂರಾತಿ ಇಲ್ಲದೆ ಓಸಿ ನೀಡಲು ಅವಕಾಶ ಇರಲಿಲ್ಲ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುಮಾರು 3.30 ಲಕ್ಷ ಕಟ್ಟಡಗಳು ನಿರ್ಮಾಣ ಪೂರ್ಣಗೊಂಡಿದ್ದರೂ ಓಸಿ ಇಲ್ಲದೆ ವಿದ್ಯುತ್ ಸಂಪರ್ಕ ನೀಡಿರಲಿಲ್ಲ. ಬೆಂಗಳೂರಿನಲ್ಲಿ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯದೆ ಕಟ್ಟಡ ನಿರ್ಮಾಣ ಮಾಡಿ ವಿದ್ಯುತ್ ಸಂಪರ್ಕ ಕೋರಿ ಸಲ್ಲಿಕೆಯಾದ ಲಕ್ಷಾಂತರ ಅರ್ಜಿಗಳು ಬಾಕಿ ಇದ್ದು, ಇವುಗಳಿಗೆ ಒಂದು ಬಾರಿಯ ಕ್ರಮವಾಗಿ ವಿಲೇ ಮಾಡಲು ಪ್ರತ್ಯೇಕ ಕಾನೂನು ರಚಿಸಲು ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಅಧಿಕೃತವಾಗಿ ಈ ಬಗ್ಗೆ ಪ್ರಕಟಿಸಿದ್ದು, ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2018ರ ಕಲಂ 241(7)ರ ಅವಕಾಶದಡಿ 1,200 ಚದರ ಅಡಿಗಳಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧಿನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read