HomeLatest NewsGOOD NEWS: ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ಒಸಿ ಕಡ್ಡಾಯದಿಂದ ವಿದ್ಯುತ್ ಸಂಪರ್ಕ ಸಮಸ್ಯೆಗೆ ಪರಿಹಾರ...

GOOD NEWS: ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ಒಸಿ ಕಡ್ಡಾಯದಿಂದ ವಿದ್ಯುತ್ ಸಂಪರ್ಕ ಸಮಸ್ಯೆಗೆ ಪರಿಹಾರ ಶೀಘ್ರ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ(ಒಸಿ) ಕಡ್ಡಾಯಗೊಳಿಸಿರುವುದರಿಂದ ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಸಮಸ್ಯೆಯಾಗುತ್ತಿದ್ದು, ಇದಕ್ಕೆ ಶೀಘ್ರವೇ ಪರಿಹಾರ ಕಲ್ಪಿಸುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ವಸತಿ, ವಾಣಿಜ್ಯ ಹಾಗೂ ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಮಸ್ಯೆಯಾಗುತ್ತಿರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಾರ್ಜ್ ಹೇಳಿದ್ದಾರೆ.

ವಿದ್ಯುತ್ ಸಂಪರ್ಕಗಳಿಗೆ ಒಸಿ ಕಡ್ಡಾಯಗೊಳಿಸುವುದರಿಂದ ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ಆಗಿರುವ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕುರಿತು ಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular