BIG UPDATE: ಭೀಕರ ರೈಲು ಅಪಘಾತ ಬಳಿಕ 48 ರೈಲು ಸಂಚಾರ ರದ್ದು, ಹಲವು ರೈಲುಗಳ ಮಾರ್ಗ ಬದಲು; ಇಲ್ಲಿದೆ ವಿವರ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ 48 ರೈಲುಗಳನ್ನು ರದ್ದುಗೊಳಿಸಲಾಗಿದೆ, 39 ಮಾರ್ಗಗಳನ್ನು ಬದಲಾಯಿಸಲಾಗಿದೆ ಮತ್ತು 10 ರೈಲುಗಳನ್ನು ಕಡಿಮೆಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ತಿರುವನಂತಪುರಂ-ಕೋಲ್ಕತ್ತಾ ಸೂಪರ್‌ಫಾಸ್ಟ್ ಎಕ್ಸ್ ಪ್ರೆಸ್ (22641), ಬೆಂಗಳೂರು-ಗುವಾಹಟಿ ಸೂಪರ್‌ಫಾಸ್ಟ್ ಎಕ್ಸ್ ಪ್ರೆಸ್ (12509) ಮತ್ತು ಹೌರಾ-ತಿರುಪತಿ ಹಮ್ಸಫರ್ ಎಕ್ಸ್ ಪ್ರೆಸ್ (20889) ರೈಲುಗಳನ್ನು ರದ್ದು ಮಾಡಲಾಗಿದೆ. ಮಾರ್ಗ ಬದಲಿಸಿದ ರೈಲುಗಳಲ್ಲಿ ಕನ್ಯಾಕುಮಾರಿ-ದಿಬ್ರುಗಢ್ ವಿವೇಕ್ ಎಕ್ಸ್ ಪ್ರೆಸ್ (22503) ಮತ್ತು ಹೌರಾ-ಮೈಸೂರು ಎಕ್ಸ್ ಪ್ರೆಸ್ (22817) ಸೇರಿವೆ.

ಇಲ್ಲಿದೆ ನೋಡಿ ಸಂಪೂರ್ಣ ರೈಲುಗಳ ಪಟ್ಟಿ ( use screenshot of list please)

ಶುಕ್ರವಾರ ಸಂಜೆ ಸಂಭವಿಸಿದ ಮೂರು ರೈಲು ಅಪಘಾತದಲ್ಲಿ ಕನಿಷ್ಠ 238 ಜನರು ಸಾವನ್ನಪ್ಪಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read