BREAKING: ಗುಂಡೇಟಿನಿಂದ ಗಾಯಗೊಂಡಿದ್ದ ಒಡಿಶಾ ಸಚಿವ ಕೊನೆಯುಸಿರು

ಭುವನೇಶ್ವರ: ಗುಂಡೇಟಿನಿಂದ ಗಾಯಗೊಂಡಿದ್ದ ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್(61) ಕೊನೆಯುಸಿರೆಳೆದಿದ್ದಾರೆ.

ಝಾರ್ಸುಗುಡಾ ಜಿಲ್ಲೆಯ ಬ್ರಜರಾಜ ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಎಎಸ್ಐನಿಂದ ಗುಂಡೇಟಿಗೆ ಒಳಗಾಗಿದ್ದ ಸಚಿವ ನಬಾ ಕಿಶೋರ್ ದಾಸ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಝಾರ್ಸುಗುಡಾ ಜಿಲ್ಲೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್‌ ಗೋಪಾಲ್ ದಾಸ್ ಸಚಿವರ ಮೇಲೆ ಗುಂಡು ಹಾರಿಸಿದ್ದು, ಅವರ ಎದೆಗೆ ಗುಂಡು ತಾಗಿ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಭಾನುವಾರ ಭುವನೇಶ್ವರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಗಾಂಧಿ ಚೌಕದಲ್ಲಿ ನಬಾ ದಾಸ್ ತನ್ನ ಕಾರಿನಿಂದ ಇಳಿದಾಗ ಗೋಪಾಲ್ ದಾಸ್ ಕನಿಷ್ಠ ನಾಲ್ಕರಿಂದ ಐದು ಗುಂಡುಗಳನ್ನು ಹಾರಿಸಿದ್ದಾನೆ. ಬ್ರಜರಾಜನಗರ ಪಟ್ಟಣದಲ್ಲಿ ಸಚಿವರು ಸಭೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿ ಎಎಸ್‌ಐ ಗೋಪಾಲ್ ದಾಸ್ ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆತ ಮಾನಸಿಕವಾಗಿ ಸರಿ ಇರಲಿಲ್ಲ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read