HomeIndiaBIG NEWS: ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಸಾಧನೆ ತೋರಿದ ಒಡಿಶಾ ಕಾಂಗ್ರೆಸ್ ಸಮಿತಿ ವಿಸರ್ಜನೆ

BIG NEWS: ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಸಾಧನೆ ತೋರಿದ ಒಡಿಶಾ ಕಾಂಗ್ರೆಸ್ ಸಮಿತಿ ವಿಸರ್ಜನೆ

ನವದೆಹಲಿ: ಈ ಬಾರಿಯ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ವಿಸರ್ಜಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒಡಿಶಾ ಕಾಂಗ್ರೆಸ್ ಸಮಿತಿ ವಿಸರ್ಜಿಸಿದ್ದಾರೆ. ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ, ಜಿಲ್ಲಾ, ಬ್ಲಾಕ್, ಮಂಡಲ ಸಮಿತಿಗಳನ್ನು ವಿಸರ್ಜಿಸುವ ಪ್ರಸ್ತಾಪವನ್ನು ಭಾನುವಾರ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ.

ಇದುವರೆಗೆ ಶರತ್ ಪಟ್ನಾಯಕ್ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು. ಪೊಟ್ಟಂಗಿ ಕ್ಷೇತ್ರದ ಶಾಸಕ ರಾಮಚಂದ್ರ ಕದಂ ಅವರನ್ನು ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರನ್ನಾಗಿ, ಬಸುದೇವಪುರದ ಶಾಸಕ ಅಶೋಕ್ ದಾಸ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ, ರಾಜಂಗಪುರದ ಶಾಸಕ ಸಿ.ಎಸ್. ರಾಜೇನ್  ಎಕ್ಕಾ ಅವರನ್ನು ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular