HomeIndiaBIG NEWS: ಒಡಿಶಾ ರೈಲು ಅಪಘಾತ ಪ್ರಕರಣ; ಗಾಯಾಳುಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತ

BIG NEWS: ಒಡಿಶಾ ರೈಲು ಅಪಘಾತ ಪ್ರಕರಣ; ಗಾಯಾಳುಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತ

ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್ ಅಪಘತಕ್ಕೀಡಾಗಿದ್ದು, ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಇನ್ನಷ್ಟು ಗಾಯಗಳಾಗಿವೆ.

ಬಾಲ್ ಸೋರ್ ನಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಬಂಗಾಳದ ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗುತ್ತಿದೆ. ಈ ಮಧ್ಯೆ, ಮಾರ್ಗ ಮಧ್ಯೆ ಮೇದಿನಿಪುರ ಬಳಿ ಬಸ್ ಪಿಕಪ್ ವ್ಯಾನ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬಸ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular