HomeIndiaಒಡಿಶಾ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಸಾವು, ಶೋಕಾಚರಣೆ ಘೋಷಿಸಿದ ಸಿಎಂ ನವೀನ್ ಪಟ್ನಾಯಕ್

ಒಡಿಶಾ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಸಾವು, ಶೋಕಾಚರಣೆ ಘೋಷಿಸಿದ ಸಿಎಂ ನವೀನ್ ಪಟ್ನಾಯಕ್

ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ಶೋಕಾಚರಣೆಯ ದಿನ ಘೋಷಿಸಿದ್ದಾರೆ.

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಶನಿವಾರ ಒಂದು ದಿನದ ಶೋಕಾಚರಣೆಗೆ ಆದೇಶಿಸಿದ್ದಾರೆ. ಜೂನ್ 3 ರಂದು ರಾಜ್ಯದಾದ್ಯಂತ ಯಾವುದೇ ಆಚರಣೆ ನಡೆಯುವುದಿಲ್ಲ ಎಂದು ಒಡಿಶಾದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಟ್ವೀಟ್ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಡಿಶಾ ರೈಲು ಅಪಘಾತದ ನಂತರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಭಾಗವಾಗಿ ರಕ್ತದಾನ ಮಾಡಲು ಜನರು ಮುಂದಾಗಿದ್ದು, ಮಾನವೀಯತೆ ತೋರಿದ್ದಾರೆ. ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ರಕ್ತದಾನಿಗಳು ಭದ್ರಕ್‌ನ ಜಿಲ್ಲಾ ಕೇಂದ್ರ ಆಸ್ಪತ್ರೆಯಲ್ಲಿ ಸೇರಿದ್ದಾರೆ.

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿದೆ. 900 ಮಂದಿ ಗಾಯಗೊಂಡಿದ್ದಾರೆ” ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಖಚಿತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular