ಒಡಿಶಾ ರೈಲು ಅಪಘಾತ: ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ಅದಾನಿ ಗ್ರೂಪ್ ನೆರವು

ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅದಾನಿ ಗ್ರೂಪ್ ನಿರ್ಧರಿಸಿದೆ ಎಂದು ಅಧ್ಯಕ್ಷ ಗೌತಮ್ ಅದಾನಿ ಭಾನುವಾರ ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, ಒಡಿಶಾ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರ ದುಃಖಿತರಾಗಿದ್ದೇವೆ. ಈ ಅಪಘಾತದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ ತೆಗೆದುಕೊಳ್ಳುತ್ತದೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ನೀಡುವುದು ಮತ್ತು ಮಕ್ಕಳಿಗೆ ಉತ್ತಮ ನಾಳೆಗಳನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

https://twitter.com/gautam_adani/status/1665319913790279680

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read