HomeIndiaಪ್ರವಾಸಿ ಬಸ್ ಅಪಘಾತ: ಮಹಿಳೆಯರು ಸೇರಿ ಐವರು ದುರ್ಮರಣ

ಪ್ರವಾಸಿ ಬಸ್ ಅಪಘಾತ: ಮಹಿಳೆಯರು ಸೇರಿ ಐವರು ದುರ್ಮರಣ

ಭುವನೇಶ್ವರ: ಪ್ರವಾಸಿ ಬಸ್ ರಸ್ತೆ ಬಡಿಯ ಬಂಡೆಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯರು ಸೇರಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ಒಡಿಶಾದ ನಯಾಗಢ ಜಿಲ್ಲೆಯಲ್ಲಿ ನಡೆದಿದೆ.

ಪ್ರವಾಸಿ ಬಸ್ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮೃತರೆಲ್ಲರೂ ಬೆರ್ಹಾಂಪುರ್ ನಿವಾಸಿಗಳಾಗಿದ್ದು, ಬಸ್ ಚಾಲಕ ಕೂಡ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆರ್ಹಾಂಪುರ್‌ನಿಂದ ಹರಿಶಂಕರ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ 60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಹನುಮಾನ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಬದಿಯಲ್ಲಿದ್ದ ಬೃಹತ್ ಬಂಡೆಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

10ಕ್ಕೂ ಹೆಚ್ಚು ಜನರು ಬಸ್‌ನ ಕೆಳಗೆ ಸಿಲುಕಿಕೊಂಡಿದ್ದಾರೆ. ಇದರಿಂದ ಅವರಲ್ಲಿ ಅನೇಕರು ಹೊರಬರಲಾಗದೆ ಒದ್ದಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ಆಗಮಿಸಿದವು. ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಗ್ಯಾಸ್ ಕಟ್ಟರ್ ಬಳಸಿ ರಕ್ಷಿಸಲಾಯಿತು.

ಗಾಯಗೊಂಡ ಪ್ರಯಾಣಿಕರನ್ನು ದಸ್ಪಲ್ಲಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಕೆಲವರನ್ನು ಜಿಲ್ಲಾ ಕೇಂದ್ರದ ಆಸ್ಪತ್ರೆಗಳಿಗೆ ದಾಅಖಲಿಸಲಾಗಿದೆ. ಅತಿ ವೇಗವೇ ಅಪಗಹತಕ್ಕೆ ಕಾರಣ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular