HomeIndiaBREAKING: ಟ್ರಕ್ ಹಾಗೂ ಪೊಲೀಸ್ ವ್ಯಾನ್ ಮುಖಾಮುಖಿ ಡಿಕ್ಕಿ: ಐವರು ಪೊಲೀಸರು ದುರ್ಮರಣ

BREAKING: ಟ್ರಕ್ ಹಾಗೂ ಪೊಲೀಸ್ ವ್ಯಾನ್ ಮುಖಾಮುಖಿ ಡಿಕ್ಕಿ: ಐವರು ಪೊಲೀಸರು ದುರ್ಮರಣ

ಭುವನೇಶ್ವರ್: ಟ್ರಕ್ ಹಾಗೂ ಪೊಲೀಸ್ ವ್ಯಾನ್ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪೊಲೀಸರು ಸಾವನ್ನಪ್ಪಿರುವ ಘೋರ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಜಾರ್ಸುಗುಡಾ ಜಿಲ್ಲೆಯ ಸಾದರ್ ಪೊಲೀಸ್ ಸ್ಟೇಷನ್ ಎದುರೇ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಸ್ಥಳದಲ್ಲೇ ಐವರು ಪೊಲೀಸ್ ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ಸಬ್ ಇನ್ಸ್ ಪೆಕ್ಟರ್ ನಿರಂಜನ್ ಕುಜೂರ್, ಲಿಂಗರಾಜ್ ಧುರುವಾ, ಕಾಶಿರಾಮ್ ಭೋಯ್, ದೇಬ್ಡತ್ ಸಾ, ಭಕ್ರಬಂಧು ಮಿರ್ದಾ ಎಂದು ಗುರುತಿಸಲಾಗಿದೆ. ಗಾಯಾಳು ಮೂವರು ಪೊಲೀಸ್ ಸಿಬ್ಬಂದಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಿಸಿಆರ್ ವ್ಯಾನ್ ಹಾಗೂ ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳು ರಸ್ತೆ ಪಕ್ಕದ ಪ್ರದೇಶಕ್ಕೆ ಹೋಗಿ ಬಿದ್ದಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular