ಭುವನೇಶ್ವರ: ದೇಶಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸುಡು ಬಿಸಿಲಿನಲ್ಲಿಯೂ ಜನಗಣತಿ ಕಾರ್ಯಕ್ಕೆ ತೆರಳಿದ್ದ ಶಾಲೆಯ ಹೆಡ್ ಮಾಸ್ಟರ್ ಓರ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
ಒಡಿಶಾದ ಸುಬರ್ಣಾಪುರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಮುಖ್ಯ ಶಿಕ್ಷಕ ಬನ್ಸಿಧರ್ ಭೋಯ್ ಮ್ಋತ ದುರ್ದೈವಿ. ಒಡಿಶಾದಲ್ಲಿ ನಜಗಣತಿ ಕಾರ್ಯ ನಡೆಯುತ್ತಿದ್ದು, ಹೆಡ್ ಮಾಸ್ಟರ್ ಬನ್ಸಿಧರ್ ಅವರನ್ನು ಕೂಡ ಗಣತಿ ಕಾರ್ಯಕ್ಕೆ ನೀಮಿಸಲಾಗಿತ್ತು.
ಜನಗಣಿತಿ ಕುಮಿಸಿ ಮನೆಗೆ ವಾಪಾಸ್ ಆಗುತ್ತಿದ್ದಾಗ ರಣ ಬಿಸಿಲ ಹೊಡೆತಕ್ಕೆ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಡು ಬಿಸಿಲಿಗೆ ಹೀಟ್ ಸ್ಟ್ರೋಕ್ ನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ದೇಶಾದ್ಯಂತ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದ್ದು, ಹಲವು ರಾಜ್ಯಗಳಲ್ಲಿ ಹವಾಮಾನ ಇಲಾಖೆ ಹೀಟ್ ವೇವ್ ಅಲರ್ಟ್ ಘೋಷಣೆ ಮಾಡಿದೆ. ಹೀಟ್ ಸ್ಟ್ರೋಕ್ ಆಗುವ ಸಾಧ್ಯತೆ ಹೆಚ್ಚಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅನಗತ್ಯವಾಗಿ ಮನೆ, ಕಚೇರಿಗಳಿಂದ ಹೊರ ಹೋಗದಂತೆ ಸೂಚನೆ ನೀಡಲಾಗಿದೆ.

