HomeKarnatakaಸಮಯಕ್ಕೆ ಸರಿಯಾಗಿ ಕಚೇರಿಗೆ ಬನ್ನಿ, ಗುರುತಿನ ಚೀಟಿ ಕಡ್ಡಾಯ: ಅಧಿಕಾರಿಗಳು, ನೌಕರರಿಗೆ ಸರ್ಕಾರ ಸೂಚನೆ

ಸಮಯಕ್ಕೆ ಸರಿಯಾಗಿ ಕಚೇರಿಗೆ ಬನ್ನಿ, ಗುರುತಿನ ಚೀಟಿ ಕಡ್ಡಾಯ: ಅಧಿಕಾರಿಗಳು, ನೌಕರರಿಗೆ ಸರ್ಕಾರ ಸೂಚನೆ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯದ ಸಮಯದಲ್ಲಿ ಅನುಸರಿಸಬೇಕಿರುವ ಸೂಚನೆಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸುತ್ತೋಲೆ ಹೊರಡಿಸಿದೆ.

ಕೆಲವರು ಕರ್ತವ್ಯದ ಅವಧಿಯಲ್ಲಿ ನಿಯಮ ಪಾಲಿಸದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಬರುವ ಮತ್ತು ಹೊರಡುವ ವೇಳೆ ಪಾಲಿಸಬೇಕು. ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ತಿಳಿಸಲಾಗಿದೆ.

ನೌಕರರು, ಅಧಿಕಾರಿಗಳು ತಮಗೆ ನಿಗದಿಪಡಿಸಲಾದ ಕರ್ತವ್ಯ ಪೂರ್ಣವಾಗಿ ನಿರ್ವಹಿಸಬೇಕು. ಕೆಲಸದ ನಿಮಿತ್ತ ಕಚೇರಿಯಿಂದ ಹೊರಗೆ ತೆರಳಬೇಕಾದಲ್ಲಿ ಚಲನವಲನ ವಹಿಯಲ್ಲಿ ಸಕಾರಣ ನಮೂದಿಸಿ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular