HomeKarnatakaಅಕ್ರಮ ಆಸ್ತಿ ಪ್ರಕರಣದಲ್ಲಿ ಅಧಿಕಾರಿಗೆ ಬಿಗ್ ಶಾಕ್: 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ...

ಅಕ್ರಮ ಆಸ್ತಿ ಪ್ರಕರಣದಲ್ಲಿ ಅಧಿಕಾರಿಗೆ ಬಿಗ್ ಶಾಕ್: 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ

ಬೆಂಗಳೂರು: ಸರ್ಕಾರಿ ಸೇವಾವಧಿಯಲ್ಲಿ ತನ್ನ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಗಳಿಸಿದ್ದ ಹಿನ್ನಲೆಯಲ್ಲಿ ಚಿಕ್ಕಜಾಲ ಬಿಲ್ ಕಲೆಕ್ಟರ್ ಕೃಷ್ಣಪ್ಪ ಅವರಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50.20 ಲಕ್ಷ ರೂ. ದಂಡ ಮತ್ತು ದಂಡ ವಿಧಿಸಿದ್ದು ದಂಡ ಕಟ್ಟಲು ವಿಫಲರಾದಲ್ಲಿ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಬೆಂಗಳೂರು ನಗರದ ನಗರ ಸಿವಿಲ್ ನ್ಯಾಯಾಲಯ(ಸಿಸಿಹೆಚ್ -24) ತೀರ್ಪು ನೀಡಿದೆ.

ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟ‌ರ್ ಎಂ.ಜೆ. ದಯಾನಂದ್ ಅವರು ನೀಡಿದ ಸೋರ್ಸ್ ವರದಿಯ ಆಧಾರದ ಮೇಲೆ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ವಿಜಯ್‌ ಕುಮಾರ್ ಪ್ರಕರಣ ದಾಖಲಿಸಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎನ್. ನವೀನ್ ಕುಮಾರ್‌ ಅವರು, ಆರೋಪಿತರು ತನ್ನ ಹಾಗೂ ತನ್ನ ಕುಟುಂಬದವರ ಹೆಸರಿನಲ್ಲಿ 63,66,528 (400.78%) ರೂ. ಗಳಷ್ಟು ಹೆಚ್ಚುವರಿ ಆಸ್ತಿಯನ್ನು ಗಳಿಸಿರುವ ಬಗ್ಗೆ ಆರೋಪಿತರಾದ ಕೃಷ್ಣಪ್ಪ ಅವರ ವಿರುದ್ದ ಸಿಸಿಹೆಚ್-24 ಬೆಂಗಳೂರು ನಗರ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿ ವಿಚಾರಣೆ ನಡೆಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ ಆರೋಪಿತರು ತನ್ನ ಹಾಗೂ ತನ್ನ ಕುಟುಂಬದವರ ಹೆಸರಿನಲ್ಲಿ ಅಕ್ರಮ ಆಸ್ತಿಯನ್ನು ಹೊಂದಿರುವುದು ವಿಚಾರಣೆಯಿಂದ ದೃಢಪಟ್ಟ ಕಾರಣ 2025 ರ ಜನವರಿ 27ರಂದು ತೀರ್ಪು ಪ್ರಕಟಿಸಿ, ಆರೋಪಿತರಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಮತ್ತು 50,20,000-ರೂ ದಂಡ ಮತ್ತು ದಂಡ ಕಟ್ಟಲು ವಿಫಲರಾದಲ್ಲಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನ್ಯಾಯಾಲಯ ತೀರ್ಪು ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular