HomeKarnatakaBIG NEWS: ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳಿವೆ; ತನಿಖೆ ನಡೆದಿದೆ ಎಂದ...

BIG NEWS: ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳಿವೆ; ತನಿಖೆ ನಡೆದಿದೆ ಎಂದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖ್ಯೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಮಹಿಳಾ ಅಧಿಕಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಅಧಿಕಾರಿ ಪ್ರತಿಮಾ ಅವರ ಹತ್ಯೆ ಬಗ್ಗೆ ಸಾಕಷ್ಟು ಅನುಮಾನಗಳು ಇವೆ. ಇಲಾಖೆ ಮಟ್ಟದಲ್ಲಿ ಅವರಿಗೆ ಯಾವುದೇ ರೀತಿ ತೊಂದರೆ ಇರಲಿಲ್ಲ ಎಂಬ ಮಾಹಿತಿಯೂ ಇದೆ. ಕೆಲವರು ಹೇಳುವ ಪ್ರಕಾರ ಕೌಟುಂಬಿಕ ಸಮಸ್ಯೆಯೂ ಇತ್ತು ಎಂಬ ಮಾತಿದೆ. ಹಾಗಾಗಿ ಎಲ್ಲಾ ರೀತಿಯಲ್ಲಿಯೂ ತನಿಖೆ ನಡೆಸಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಇಲಾಖೆಯ ಸಭೆಯಲ್ಲಿ ಕೂಡ ಅವರು ಭಾಗಿಯಾಗಿದ್ದರು. ಆ ಬಳಿಕ ಅವರನ್ನು ಯಾರು ಭೇಟಿಯಾಗಿದ್ದರು? ಯಾವ ಕಾರಣಕ್ಕಾಗಿ ಅವರ ಹತ್ಯೆ ಮಾಡಲಾಗಿದೆ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular