SHOCKING: ಕೆಲಸದ ಒತ್ತಡದಿಂದ ಅಧಿಕಾರಿ ಆತ್ಮಹತ್ಯೆ

ಮೈಸೂರು: ಕೆಲಸದ ಒತ್ತಡ ತಾಳದೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ದಟ್ಟಗಳ್ಳಿ ಹೊರ ವರ್ತುಲ ರಸ್ತೆಯ ಕೆಇಬಿ ಸಮುದಾಯಭವನದ ವಾಚ್ ಮನ್ ಶೆಡ್ ನಲ್ಲಿ ನಡೆದಿದೆ.

ಬೆಮೆಲ್ ಅಧಿಕಾರಿ ಎಲ್. ಮೋಹನ್ ರಾವ್(54) ಆತ್ಮಹತ್ಯೆ ಮಾಡಿಕೊಂಡವರು. ಬೆಮಲ್ ಡಿಜಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೋಹನ್ ರಾವ್ ಭಾನುವಾರ ಕರ್ತವ್ಯಕ್ಕೆ ತೆರಳುವುದಾಗಿ ಮನೆಯಿಂದ ಹೊರಗೆ ಹೋಗಿದ್ದಾರೆ.

ಮಧ್ಯಾಹ್ನದವರೆಗೂ ಅವರು ಕುಟುಂಬದವರೊಂದಿಗೆ ಫೋನ್ ನಲ್ಲಿ ಅವರು ಮಾತನಾಡಿದ್ದು, ನಂತರ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡ ವಿಷಯ ಗೊತ್ತಾಗಿದೆ. ಕೆಲಸ ಒತ್ತಡದಿಂದಾಗಿ ತಂದೆ ಮೋಹನ್ ರಾವ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರಿ ದೂರು ನೀಡಿದ್ದಾರೆ.

ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಲದ ಒತ್ತಡದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read