ಸಿಬಿಐ ದಾಖಲಿಸಿರುವ FIR ರದ್ದುಗೊಳಿಸುವಂತೆ ಬಾಂಬೆ ಹೈಕೋರ್ಟ್ ನಲ್ಲಿ ಸಮೀರ್ ವಾಂಖೆಡೆ ಅರ್ಜಿ

ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಎನ್ ಸಿ ಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮಾದಕ ದ್ರವ್ಯ ಪತ್ತೆ ಪ್ರಕರಣದ ಕಾರ್ಡೆಲಿಯಾ ಕ್ರೂಸ್‌ನಲ್ಲಿ ತನ್ನ ಪುತ್ರ ಆರ್ಯನ್ ಖಾನ್‌ನನ್ನು ಸಿಲುಕಿಸದಿರಲು ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರಿಂದ 25 ಕೋಟಿ ರೂ. ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಸಿಬಿಐ ತನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸಮೀರ್ ವಾಂಖೆಡೆ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್‌ನ ರಜಾಕಾಲದ ಪೀಠದ ಮುಂದೆ ಸಲ್ಲಿಸಲಾದ ಅರ್ಜಿಯಲ್ಲಿ, ಸಮೀರ್ ವಾಂಖೆಡೆ ಅವರು ತಮ್ಮ ವಿರುದ್ಧ ಕೇಂದ್ರೀಯ ತನಿಖಾ ದಳದ (ಸಿಬಿಐ) ಪ್ರಥಮ ಮಾಹಿತಿ ವರದಿಗೆ (ಎಫ್‌ಐಆರ್) ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಕೋರಿದ್ದಾರೆ. ಪೀಠವು ಅವರ ಮನವಿಯನ್ನು ಇಂದು ವಿಚಾರಣೆ ನಡೆಸಲಿದೆ.

ಸಿಬಿಐ ಇತ್ತೀಚೆಗೆ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಕಾರ್ಡೆಲಿಯಾ ಕ್ರೂಸ್‌ ಮೇಲೆ ದಾಳಿ ಪ್ರಕರಣದಲ್ಲಿ ಸಮೀರ್ ವಾಂಖೆಡೆ ಮತ್ತು ಇತರರು ಆರ್ಯನ್ ಖಾನ್ ಅವರನ್ನು ಸಿಲುಕಿಸದಿರಲು 25 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಅದಕ್ಕಾಗಿ ಮುಂಗಡ 50 ಲಕ್ಷ ರೂಪಾಯಿ ಲಂಚ ಪಡೆದಿದ್ದರು ಎನ್ನಲಾಗಿದೆ.

2021 ರಲ್ಲಿ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ದಾಳಿ ಮಾಡಿದ ಎನ್ ಸಿ ಬಿ ಟೀಂ ಆರ್ಯನ್ ಖಾನ್ ರನ್ನು ಪ್ರಕರಣದಲ್ಲಿ ಹೆಸರಿಸಿತ್ತು. ಆದರೆ ನಂತರ ಅವರನ್ನು ಪ್ರಕರಣದಿಂದ ಕೈಬಿಡಲಾಗಿತ್ತು.

ನಾಲ್ಕು ವಾರಗಳ ಕಾಲ ಜೈಲಿನಲ್ಲಿ ಕಳೆದಿದ್ದ ಆರ್ಯನ್ ಖಾನ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2022ರ ಮೇ ತಿಂಗಳಲ್ಲಿ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿತು.

ಡ್ರಗ್ಸ್ ವಿರೋಧಿ ಏಜೆನ್ಸಿ ಸ್ಥಾಪಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ವಾಂಖೆಡೆ ನೇತೃತ್ವದ ತನಿಖೆಯು ಲೋಪವಾಗಿದೆ ಎಂದು ಹೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read