HomeLatest Newsಲಂಚ ಕೇಳಿದ ಅಧಿಕಾರಿ: ಹಣವಿಲ್ಲದ ಕಾರಣ ಮೂಲಂಗಿಯನ್ನೇ ಲಂಚವಾಗಿ ಕೊಡಲು ತಂದ ರೈತ

ಲಂಚ ಕೇಳಿದ ಅಧಿಕಾರಿ: ಹಣವಿಲ್ಲದ ಕಾರಣ ಮೂಲಂಗಿಯನ್ನೇ ಲಂಚವಾಗಿ ಕೊಡಲು ತಂದ ರೈತ

ತುಮಕೂರು: ಜಮೀನಿಗೆ ರಸ್ತೆ ಮಾಡಿಕೊಡಲು ಲಂಚ ಕೇಳಿದ ಅಧಿಕಾರಿಗಳಿಗೆ ರೈತನೊಬ್ಬ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ತಾಲೂಕು ಕಚೇರಿಗೆ ತಂದ ಘಟನೆ ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ನಡೆದಿದೆ.

ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯ ರೈತ ಪ್ರಸನ್ನಕುಮಾರ್ ತಾಲೂಕು ಕಚೇರಿ ಮುಂದೆ ಮೈಕ್ ಹಿಡಿದು, ನನ್ನ ಬಳಿ ಲಂಚ ನೀಡಲು ಹಣವಿಲ್ಲ, ಬದಲಿಗೆ ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ ಬನ್ನಿ ಎಂದು ಕೂಗಿದ್ದಾರೆ.

ತನ್ನ ಜಮೀನಿಗೆ ರಸ್ತೆ ಇಲ್ಲದ ಕಾರಣ ರಸ್ತೆ ನಿರ್ಮಿಸಿಕೊಡಲು ಎರಡು ವರ್ಷದ ಹಿಂದೆ ಅರ್ಜಿ ಸಲ್ಲಿಸಿ ಮನವಿ ಮಾಡಲಾಗಿತ್ತು. ಅಧಿಕಾರಿಗಳು ರಸ್ತೆ ಮಾಡಿಕೊಡಲು ಹಿಂದೇಟು ಹಾಕಿದ್ದರಿಂದ ಲೋಕಾಯುಕ್ತ ಕೋರ್ಟ್ ಮೊರೆ ಹೋಗಿದ್ದರು. ಲೋಕಾಯುಕ್ತ ಕೋರ್ಟ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಒಂದು ತಿಂಗಳಲ್ಲಿ ರಸ್ತೆ ನಿರ್ಮಿಸಿಕೊಡಲು ಆದೇಶಿಸಿತ್ತು. ಆದರೆ, ಎರಡು ತಿಂಗಳೇ ಕಳೆದರೂ ರಸ್ತೆ ನಿರ್ಮಿಸಿ ಕೊಟ್ಟಿಲ್ಲ ಎಂದು ರೈತ ಪ್ರಸನ್ನಕುಮಾರ್ ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular