ಬೆಂಗಳೂರು : ರಾಜ್ಯದ ನಿರುದ್ಯೋಗಿ ಯುವಜನತೆ ಹಾಗೂ ಕೃಷಿ ಪದವೀಧರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೃಷಿ ಇಲಾಖೆಯ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಒಟ್ಟು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಪಾರದರ್ಶಕವಾಗಿ ನಡೆಸಲು ಸೂಚಿಸಲಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಬೀಳುವ ಸಾಧ್ಯತೆಯಿದೆ. ಇಲಾಖೆಯಲ್ಲಿನ ಮಾನವ ಸಂಪನ್ಮೂಲ ಕೊರತೆಯನ್ನು ನೀಗಿಸಲು ಹಾಗೂ ರೈತರಿಗೆ ಸಕಾಲದಲ್ಲಿ ತಾಂತ್ರಿಕ ನೆರವು ನೀಡಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ಹೌದು, ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಇಲಾಖೆಯಲ್ಲಿನ ಒಟ್ಟು 945 ಕೃಷಿಅಧಿಕಾರಿ ಮತ್ತುಸಹಾಯಕ ಕೃಷಿಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಕೃತ ಆದೇಶ ಹೊರಡಿಸಲಾಗಿದೆ.
ಹುದ್ದೆಗಳ ವಿವರ
- ಕೃಷಿ ಅಧಿಕಾರಿ (ಗ್ರೂಪ್–ಬಿ): 128 ಹುದ್ದೆಗಳು.
- ಸಹಾಯಕ ಕೃಷಿ ಅಧಿಕಾರಿ: 817 ಹುದ್ದೆಗಳು.
ನೇಮಕಾತಿಪ್ರಕ್ರಿಯೆ: ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA ) ಮುಖಾಂತರ ನಡೆಸಲು ಸರ್ಕಾರವು ಕೃಷಿ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಿದೆ. ಶೀಘ್ರದಲ್ಲೇ ಕೆಇಎ ವತಿಯಿಂದ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


