ಯಾದಗಿರಿ: ವಾಣಿಜ್ಯ ಉದ್ದೇಶಗಳಿಗಾಗಿ ಅಕ್ರಮವಾಗಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ಬಳಸುತ್ತಿದ್ದ ಹೋಟೆಲ್ ಮತ್ತು ಆಹಾರ ಮಳಿಗೆಗಳ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮಾರ್ಚ್ 12 ರಂದು ನಗರದ ವಿವಿಧೆಡೆ ನಡೆದ ಈ ಕಾರ್ಯಾಚರಣೆಯಲ್ಲಿ ಒಟ್ಟು 46 ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹೋಟೆಲ್ಗಳಲ್ಲಿ ವಾಣಿಜ್ಯ ಸಿಲಿಂಡರ್ಗಳ ಬದಲಿಗೆ ಕಡಿಮೆ ದರದ ಗೃಹಬಳಕೆಯ ಸಿಲಿಂಡರ್ಗಳನ್ನು ಬಳಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದರು.ಯಾದಗಿರಿ ನಗರದ ಪ್ರಮುಖ ಹೋಟೆಲ್ಗಳು ಮತ್ತು ತಿಂಡಿ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದಾಗ ಈ ಅಕ್ರಮ ಪತ್ತೆಯಾಗಿದೆ.
ಎಚ್ಚರಿಕೆ: ನಿಯಮ ಉಲ್ಲಂಘಿಸಿ ಗೃಹಬಳಕೆಯ ಸಿಲಿಂಡರ್ ಬಳಸುವ ಹೋಟೆಲ್ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಗೃಹಬಳಕೆಯ ಸಿಲಿಂಡರ್ಗಳಿಗೆ ನೀಡಲಾಗುವ ಸಬ್ಸಿಡಿಯನ್ನು ದುರುಪಯೋಗಪಡಿಸಿಕೊಳ್ಳುವ ಇಂತಹ ದಂಧೆಗಳ ವಿರುದ್ಧ ಇಲಾಖೆಯು ರಾಜ್ಯಾದ್ಯಂತ ನಿಗಾ ಇರಿಸಿದೆ.

