ಬರ ಹಿನ್ನಲೆ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು : ಸಚಿವ ಎಸ್.ಎಸ್ ಮಲ್ಲಿಕಾರ್ಜನ್ ಸೂಚನೆ

ದಾವಣಗೆರೆ: ಈ ವರ್ಷ ಮುಂಗಾರು ಮತ್ತು ಹಿಂಗಾರು ಕೈ ಕೊಟ್ಟಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಲ್ಲಿದ್ದು, ಈ ಸಂಕಷ್ಟದ ವೇಳೆ ಸಮರ್ಪಕ ಕುಡಿಯುವ ನಿರು ಪೂರೈಕೆ ಮತ್ತು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ  ಕೆಲಸ ಮಾಡಬೇಕೆಂದು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಸೂಚನೆ ನೀಡಿದರು.

 ಅವರು ಮಂಗಳವಾರ (ನ.21 ) ಜಗಳೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಿದÀರು. ಬರ ಸ್ಥಿತಿ ಇರುವುದರಿಂದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಬಹುದು. ಈ ಸಮಸ್ಯೆಯನ್ನು ಎದುರಿಸಲು ಎಲ್ಲ ಗ್ರಾಮ ಪಂಚಾಯಿತಿ ಪಿಡಿಓ, ಗ್ರಾಮ  ಲೆಕ್ಕಾಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಲಭ್ಯರಿದ್ದು, ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.

ಶುದ್ದ ಕುಡಿಯುವ ನೀರಿನ ಘಟಕ ನಿವಾರಣೆ: ಜಗಳೂರು ತಾಲ್ಲೂಕು ಬರ ಪೀಡಿತ ಪ್ರದೇಶವಾಗಿದ್ದು, 48 ಗ್ರಾಮಗಳು ಪ್ಲೋರ್‍ಡ್‍ಯಿಂದ ಕೂಡಿವೆ  ಈ ಗ್ರಾಮಗಳಲ್ಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿ ಮತ್ತು  ಈಗಾಗಲೇ ಸ್ಥಾಪಿಸಲಾಗಿರುವ ಘಟಕಗಳ ಸರಿಯಾದ ನಿರ್ವಹಣೆÉ ಮಾಡಿ ಜನರಿಗೆ ತೊಂದರೆಯಾಗಂದಂತೆ ನೀರು ಪೂರೈಕೆ ಮಾಡಲು ಸೂಚಿಸಿ ತಾಲ್ಲೂಕಿನಲ್ಲಿ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪ್ಲೋರ್‍ರೈಡ್ ಸಮಸ್ಯೆ ನಿವಾರಣೆ ಆಗಲಿದೆ ಎಂದರು.

 ತೋಟಗಾರಿಕೆ:  ಜಿಲ್ಲೆಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಸಹಾಯಧನÀ ಯೋಜನೆಯಡಿ ಈ ವರ್ಷ ರೂ.50 ಕೋಟಿ ಮೀಸಲಿರಿಸಲಾಗಿದೆ. ಆದರಲ್ಲಿ ಜಗÀಳೂರು ತಾಲ್ಲೂಕಿಗೆ ರೂ.5 ಕೋಟಿ ಅನುದಾನ ನೀಡಲಾಗುತ್ತಿದೆ. ಮತ್ತು ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಬೇಡಿಕೆಗೆ ಅನುಸಾರವಾಗಿ ಒದಗಿಸಲಾಗುತ್ತದೆ,  ಯಾವುದೇ ಅನುದಾನದ ಕೊರತೆ ಇರುವುದಿಲ್ಲ ಎಂದರು.

ಖಾತರಿಯಡಿ ಉದ್ಯೋಗ: ಬರ ಹಿನ್ನಲೆಯಲ್ಲಿ ಜನರಿಗೆ ಹೆಚ್ಚಿನ ಉದ್ಯೋಗ ನೀಡಬೇಕಾಗಿದೆ ಪ್ರತಿ ಕುಟುಂಬಕ್ಕೆ ಈಗಿರುವ 100 ದಿನಗಳಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುಮೋದನೆಯಾಗಿರುವುದಿಲ್ಲ. ಆದರೂ ಸಹ ಬೇಡಿಕೆಗೆ ಅನುಗುಣವಾಗಿ ಹೆಚ್ಚು ಖಾತರಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು. ಬಿಸ್ತುವಳ್ಳಿ,  ದೇವಿಕೆರೆ, ಗುರುಸಿದ್ದಾಪುರ, ಹನುಮಂತಪುರ, ಇಲ್ಲಿ ಶೇ25 ಕ್ಕಿಂತ ಕಡಿಮೆ ಉದ್ಯೋಗ ಖಾತರಿ ಕೆಲಸ ಮಾಡಲಾಗಿದೆ. ಇದರ ಪ್ರಗತಿಯನ್ನು ತಕ್ಷಣವೇ ಕೈಗೊಳ್ಳಲು ಸೂಚಿಸಿದರು.

ಕೃಷಿ:  ಜಗಳೂರು ತಾಲ್ಲೂಕಿನಲ್ಲಿ 409 ಮೀ.ಮೀ ವಾಡಿಕೆಗೆ 361 ಮೀ.ಮೀ ಮಳೆಯಾಗಿದೆ. ಜುಲೈ ತಿಂಗಳಲ್ಲಿ ಮಾತ್ರ ಹೆಚ್ಚು ಮಳೆಯಾಗಿದ್ದು, ಆಗಸ್ಟ್, ಸೆಪ್ಟೆಂಬರ್‍ನಲ್ಲಿ ಮಳೆ ತೀವ್ರ ಕೊರತೆಯಿಂದ ಶೇ.80 ರಷ್ಟು ಬೆಳೆ ನಷ್ಟವಾಗಿದೆ. ಈ ವರ್ಷ 18,250 ರೈತರು ಫಸಲ್ ಭೀಮಾ ಯೋಜನೆಗೆ ನೊಂದಾಯಿಸಿದ್ದಾರೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು.

 ಈ ವೇಳೆ ಸಚಿವರು  ಮಾತನಾಡಿ ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಗೆ ಬಂದಾಗ ಎನ್‍ಡಿಆರ್‍ಎಫ್ ಮಾರ್ಗಸೂಚಿನ್ವಯ ರೂ.259 ಕೋಟಿ ಬೆಳೆ ನಷ್ಟ ವರದಿಯನ್ನು ನೀಡಲಾಗಿದೆ. ತತ್‍ಕ್ಷಣವೇ ಕೇಂದ್ರದಿಂದ 38 ಕೋಟಿ ಬೆಳೆ ಪರಿಹಾರ ಬಿಡುಗಡೆ ಮಾಡಬೇಕಾಗಿದೆ ಎಂದ ಅವರು ಬೆಳೆವಿಮೆ ಮಾಡಿಸಿದ ರೈತರಿಗೆ ವಿಮಾ ಪರಿಹಾರ ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ  ನೀರು: ತಾಲ್ಲೂಕಿನಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಟಾಸ್ಕ್ ಪೋರ್ಸ್‍ನಡಿ ಶಾಸಕರು ಸೂಚಿಸುವ ಗ್ರಾಮಗಳಿಗೆ ತಕ್ಷಣವೇ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಈ ವೇಳೆ  ಗ್ರಾಮೀಣ ಕುಡಿಯುವ ನೀರು ಪೂರೈಕೆ ವಿಭಾಗದ ಅಧಿಕಾರಿಗಳು ತಾಲ್ಲೂಕಿನ 168 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 472 ಕೋಟಿ.ರೂಗಳಿಗೆ ಯೋಜನೆ ತಯಾರಿಸಿದ್ದು ಅನುಮೋದನೆಯ ಹಂತದಲ್ಲಿ ಇದೆ ಎಂದು ತಿಳಿಸಿದರು.

ಜಗಳೂರು  ಪಟ್ಟಣ ಪಂಚಾಯಿತಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 63 ಕೊಳವೆ ಬಾವಿಗಳು ಮತ್ತು ಶಾಂತಿ ಸಾಗರ ಯೋಜನೆ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಮುಖ್ಯಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು ಈ ವೇಳೆ ಸಚಿವರು ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಸೂಚನೆ ನೀಡಿದರು.

ಗೃಹ ಲಕ್ಷ್ಮೀ:  ತಾಲ್ಲೂಕಿನಲ್ಲಿ 38,024 ಗೃಹ ಲಕ್ಷ್ಮೀ ಫಲನುಭವಿಗಳಿಗೆ ಮಾಸಿಕ ರೂ.2000 ಪಾವತಿಸಲಾಗಿದೆ. ಆದರೆ 1106 ಫಲಾನುಭವಿಗಳಿಗೆ ಆಧಾರ್ ಲಿಂಕ್ ಆಗದ ಕಾರಣ ಪಾವತಿಯಾಗಿರುವುದಿಲ್ಲ. ಇವರಿಗೆ ಆಧಾರ್ ಲಿಂಕ್ ಮಾಡಿಸಿ ಯೋಜನೆಯನ್ನು ತಲುಪಿಸಲು ಸೂಚನೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read