HomeLatest NewsJOB ALERT : ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಹುದ್ದೆಗಳಿಗೆ ಆಫ್‌ಲೈನ್ ಅರ್ಜಿ ಆಹ್ವಾನ

JOB ALERT : ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಹುದ್ದೆಗಳಿಗೆ ಆಫ್‌ಲೈನ್ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ‘ಮಿಷನ್ ಶಕ್ತಿ’ ಯೋಜನೆಯಡಿ ಬಳ್ಳಾರಿ (ಗ್ರಾಮಾಂತರ) ವ್ಯಾಪ್ತಿಯಲ್ಲಿ ಹೊಸದಾಗಿ 06 ಅಂಗನವಾಡಿ ಕಂ-ಕ್ರಷ್ ಕೇಂದ್ರಗಳು ಮಂಜೂರಾಗಿವೆ. ಈ ಕೇಂದ್ರಗಳಲ್ಲಿ ಖಾಲಿ ಇರುವ ಕ್ರಷ್ ಕಾರ್ಯಕರ್ತೆ ಮತ್ತು ಕ್ರಷ್ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

*ಅರ್ಜಿ ಪಡೆಯುವ ಮತ್ತು ಸಲ್ಲಿಸುವ ಸ್ಥಳ:

ಎಸ್‌ಪಿ ಸರ್ಕಲ್ ಹತ್ತಿರ ಇರುವ ಬಳ್ಳಾರಿ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 5.30 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಜುಲೈ 18 ಅರ್ಜಿ ಸಲ್ಲಿಸಲು ಕೊನೆಯ ದಿನ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಕಚೇರಿಗೆ ಭೇಟಿ ನೀಡಿ, ನಿಗದಿಪಡಿಸಿದ ನಮೂನೆಯ ಅರ್ಜಿಗಳನ್ನು ಪಡೆದುಕೊಂಡು, ಸೂಕ್ತ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,2026-27ನೇ ಸಾಲಿನಲ್ಲಿ ಬಿ.ಆರ್.ಸಿ ಪೂರ್ವವಲಯ ವ್ಯಾಪ್ತಿಯಲ್ಲಿ ಸಿಡಬ್ಲೂö್ಯಎಸ್‌ಎನ್ (ವಿಶೇಷ ಅಗತ್ಯವುಳ್ಳ) ಮಕ್ಕಳಿಗೆ ಫಿಸಿಯೋಥೆರಪಿ ಚಿಕಿತ್ಸೆ ನೀಡಲು ಹಾಗೂ ವೈದ್ಯರ ಸಹಾಯಕ್ಕಾಗಿ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಪೂರ್ವವಲಯದ ಕ್ಷೇತ್ರ ಸಮನ್ವಯಾಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

*ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

*ಫಿಸಿಯೋಥೆರಪಿಸ್ಟ್ (01 ಹುದ್ದೆ):* ಬ್ಯಾಚಲರ್ ಆಫ್ ಫಿಸಿಯೋಥೆರಪಿ ಅಥವಾ ಡಿಪ್ಲೋಮಾ ಆಫ್ ಫಿಸಿಯೋಥೆರಪಿ ಪದವಿ ಹೊಂದಿರಬೇಕು.ಮಹಿಳಾ ಸಹಾಯಕಿ (01 ಹುದ್ದೆ):* ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂ.30 ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

*ಅರ್ಜಿ ಸಲ್ಲಿಸಬೇಕಾದ ವಿಳಾಸ:*ಕ್ಷೇತ್ರ ಸಮನ್ವಯಾಧಿಕಾರಿಗಳು, ಬಿಆರ್‌ಸಿ ಕಚೇರಿ, ಪೂರ್ವವಲಯ ಬಳ್ಳಾರಿ. ಹುದ್ದೆಗಳ ನೇಮಕಾತಿ ಹಾಗೂ ಇತರ ನಿಯಮಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ.9916356333, 9480695074 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular