ಚಿಕ್ಕಮಗಳೂರು : ಯುವತಿಯ ಬಾಳಲ್ಲಿ ಜವರಾಯ ಅಟ್ಟಹಾಸ ಮೆರೆದ ಘಟನೆ ಎಲ್ಲರ ಮನಕಲಕಿದೆ. ಹೌದು,. ನಾಳೆ ಹಸೆಮಣೆ ಏರಬೇಕಿದ್ದ ನವವಧು ಇಂದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ನಡೆದಿದೆ.
ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆ ಸಿದ್ಧತೆಯಲ್ಲಿದ್ದ ವಧು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.
ಮೃತರನ್ನು ಶೃತಿ (32) ಎಂದು ಗುರುತಿಸಲಾಗಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಶೃತಿ ನಾಳೆ ವೈವಾಹಿಕ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಮದುವೆಗೆ ಒಂದು ದಿನ ಮೊದಲು ವಧು ಹೃದಯಾಘಾತದಿಂದ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಹೇಳತೀರದಾಗಿದೆ.ನಾಳೆ ತರೀಕೆರೆ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಬೇಕಾಗಿತ್ತು. ಆದರೆ ಇಂದು ವಧು ಶೃತಿ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
