LPG ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ದರ ಭಾರಿ ಇಳಿಕೆ: 19 ಕೆಜಿ ವಾಣಿಜ್ಯ, 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ದರ ಕಡಿತ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್(ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿವೆ.

19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗೆ 30.50 ರೂಪಾಯಿ ಇಳಿಕೆಯಾಗಿದೆ.

ವಾಣಿಜ್ಯ ಸಿಲಿಂಡರ್ ಬೆಲೆ ಏಪ್ರಿಲ್ 1 ರಿಂದ ದೆಹಲಿಯಲ್ಲಿ ಬೆಲೆ 1764.50 ಕ್ಕೆ ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ.

ಮಾರ್ಚ್ 1 ರಂದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ(LPG) ಗ್ಯಾಸ್ ಸಿಲಿಂಡರ್ ಗಳ ಬೆಲೆಗಳಲ್ಲಿ ಹೆಚ್ಚಳ ಘೋಷಿಸಿದ್ದವು. ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಏರಿಳಿತದ ಸಮಯದಲ್ಲಿ ಬೆಲೆಗಳಲ್ಲಿನ ಈ ಪರಿಷ್ಕರಣೆ ಮಾಡಲಾಗಿತ್ತು.

ಬೆಲೆ ಇಳಿಕೆಯ ಹಿಂದಿನ ನಿಖರವಾದ ಕಾರಣಗಳು ಬಹಿರಂಗಪಡಿಸದಿದ್ದರೂ, ಅಂತರರಾಷ್ಟ್ರೀಯ ತೈಲ ಬೆಲೆಗಳಲ್ಲಿನ ಬದಲಾವಣೆಗಳು, ತೆರಿಗೆ ನೀತಿಗಳಲ್ಲಿನ ಬದಲಾವಣೆಗಳು ಮತ್ತು ಪೂರೈಕೆ-ಬೇಡಿಕೆ ಯಂತಹ ವಿವಿಧ ಅಂಶಗಳು ಅಂತಹ ಹೊಂದಾಣಿಕೆಗಳಿಗೆ ಕೊಡುಗೆ ನೀಡುತ್ತವೆ.

ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read