HomeKarnatakaಎಥೆನಾಲ್ ಮಿಶ್ರಣದ ಆರೋಪ ತಳ್ಳಿಹಾಕಿದ ತೈಲ ಕಂಪನಿಗಳು

ಎಥೆನಾಲ್ ಮಿಶ್ರಣದ ಆರೋಪ ತಳ್ಳಿಹಾಕಿದ ತೈಲ ಕಂಪನಿಗಳು

ಬೆಂಗಳೂರು- ಕರ್ನಾಟಕದ ಕೆಲವು ಪೆಟ್ರೋಲ್ ಬಂಕ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಆರೋಪಗಳನ್ನು ತೈಲ ಕಂಪನಿಗಳು ತಳ್ಳಿಹಾಕಿವೆ.

ಈ ಕುರಿತು ಸ್ಪಷ್ಟನೆ ನೀಡಿರುವ ಇಂಡಿಯನ್ ಆಯಿಲ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (HPCL), ರಾಜ್ಯದ ಕೆಲವು ಪೆಟ್ರೋಲ್ ಬಂಕ್‌ಗಳಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಇತ್ತೀಚಿನ ಆರೋಪಗಳಿಗೆ ನಿಗದಿತ ಪರೀಕ್ಷಾ ವಿಧಾನಗಳ ಮೂಲಕ ನಡೆಸಿದ ತಪಾಸಣೆಯಲ್ಲಿ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು ತಿಳಿಸಿವೆ.

ದೇಶದ 27 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 893 ಪೆಟ್ರೋಲ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ ಕರ್ನಾಟಕದ 56 ಮಾದರಿಗಳೂ ಸೇರಿವೆ. ಪರೀಕ್ಷೆಗೊಳಪಡಿಸಿದ ಎಲ್ಲ ಮಾದರಿಗಳಲ್ಲಿಯೂ ನಿಗದಿತ ಶೇ.19ರಿಂದ 21ರಷ್ಟು ಎಥೆನಾಲ್ ಪ್ರಮಾಣ ಇರುವುದು ದೃಢಪಟ್ಟಿದೆ ಎಂದು ಸಂಸ್ಥೆಗಳು ಹೇಳಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಗಳ ಕುರಿತು ನೈಜಾಂಶವನ್ನು ಮತ್ತಷ್ಟು ಸ್ಪಷ್ಟಪಡಿಸುವ ಉದ್ದೇಶದಿಂದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳು ರಾಜ್ಯ ಸರ್ಕಾರದೊಂದಿಗೆ ಜಂಟಿಯಾಗಿ ಹಾಗೂ ಪಾರದರ್ಶಕವಾಗಿ ಮತ್ತೊಮ್ಮೆ ಪರೀಕ್ಷೆ ನಡೆಸಲು ಮುಂದಾಗಿವೆ.

ಇಂಧನದ ಗುಣಮಟ್ಟ, ಪಾರದರ್ಶಕತೆ ಮತ್ತು ಗ್ರಾಹಕರ ವಿಶ್ವಾಸವನ್ನು ಕಾಪಾಡಲು ಸಂಸ್ಥೆಗಳು ಬದ್ಧವಾಗಿವೆ ಎಂದು ತಿಳಿಸಿದ್ದು, ಗ್ರಾಹಕರು ಅಧಿಕೃತ ಮೂಲಗಳಿಂದ ದೃಢಪಟ್ಟ ಮಾಹಿತಿಯನ್ನಷ್ಟೇ ನಂಬಬೇಕು ಎಂದು ಮನವಿ ಮಾಡಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular