HomeKarnatakaಕೋಳಿ ಮಾಂಸ ಪ್ರಕರಣ ಮಾಸುವ ಮೊದಲೇ ಮತ್ತೊಂದು ಘಟನೆ: ತೆಂಗಿನೆಣ್ಣೆ ತಂದ ಮಹಿಳೆಯನ್ನು ಬಸ್ ನಿಂದ...

ಕೋಳಿ ಮಾಂಸ ಪ್ರಕರಣ ಮಾಸುವ ಮೊದಲೇ ಮತ್ತೊಂದು ಘಟನೆ: ತೆಂಗಿನೆಣ್ಣೆ ತಂದ ಮಹಿಳೆಯನ್ನು ಬಸ್ ನಿಂದ ಕೆಳಗಿಳಿಸಿದ ಕಂಡಕ್ಟರ್

ಬಂಟ್ವಾಳ: ಕೋಳಿ ಮಾಂಸ ತಂದಿದ್ದ ಪ್ರಯಾಣಿಕನನ್ನು ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಕೆಳಗಿಳಿಸಲು ಯತ್ನಿಸಿದ ಘಟನೆ ಇತ್ತೀಚೆಗಷ್ಟೇ ನಡೆದಿದ್ದು, ಇದು ಮಾಸುವ ಮೊದಲೇ ಮತ್ತೊಂದು ಘಟನೆ ನಡೆದಿದೆ.

ತೆಂಗಿನೆಣ್ಣೆ ಸಾಗಿಸುತ್ತಿದ್ದ ಮಹಿಳೆಯನ್ನು ಕಂಡಕ್ಟರ್ ಬಸ್ ನಿಂದ ಕೆಳಗಿಳಿಸಿದ ಘಟನೆ ಬಿಸಿ ರೋಡ್ ನಲ್ಲಿ ನಡೆದಿದೆ. ಸಾರಿಗೆ ಬಸ್ ನಲ್ಲಿ ಮಂಗಳೂರಿನಿಂದ ಹಾಸನಕ್ಕೆ ಮಹಿಳೆಯೊಬ್ಬರು ಗೋಣಿಚೀಲದಲ್ಲಿ ಮೂರು ಕ್ಯಾನ್ ತೆಂಗಿನೆಣ್ಣೆ ತೆಗೆದುಕೊಂಡು ಪ್ರಯಾಣಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ಗಮನಿಸಿದ ಕಂಡಕ್ಟರ್ ಎಣ್ಣೆ ಪದಾರ್ಥಗಳನ್ನು ಬಸ್ ನಲ್ಲಿ ತೆಗೆದುಕೊಂಡು ಹೋಗುವಂತಿಲ್ಲ ಎಂದು ಜಗಳ ಮಾಡಿ ಬಲವಂತದಿಂದ ಬಸ್ ನಿಂದ ಕೆಳಗೆ ಇಳಿಸಿದ್ದಾನೆ. ತೆಂಗಿನ ಎಣ್ಣೆ ಕ್ಯಾನ್ ಅಲ್ಲೇ ಬಿಟ್ಟು ಬಸ್ ನಿಂದ ಕೆಳಗಿಳಿದ ಮಹಿಳೆ ಬಿಸಿ ರೋಡ್ ಬಸ್ ನಿಲ್ದಾಣದಲ್ಲಿದ್ದ ಸಂಚಾರ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರು ಚಾಲಕನಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದು, ಅದೇ ಬಸ್ ನಲ್ಲಿ ಮಹಿಳೆ ತೆಂಗಿನೆಣ್ಣೆ ಸಮೇತ ಹಾಸನಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular