HomeKarnatakaBREAKING: ಮಿಥೇನ್ ಆಯಿಲ್ ಟ್ಯಾಂಕ್ ಪಲ್ಟಿಯಾಗಿ ಆಯಿಲ್ ಸೋರಿಕೆ: ರಾಯಚೂರು-ಮಂತ್ರಾಲಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್

BREAKING: ಮಿಥೇನ್ ಆಯಿಲ್ ಟ್ಯಾಂಕ್ ಪಲ್ಟಿಯಾಗಿ ಆಯಿಲ್ ಸೋರಿಕೆ: ರಾಯಚೂರು-ಮಂತ್ರಾಲಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಮಿಥೇನ್ ಆಯಿಲ್ ಟ್ಯಾಂಕರ್ ಪಲ್ಟಿಯಾಗಿ ಮಿಥೇನ್ ಆಯಿಲ್ ಸೋರಿಕೆಯಾದ ಘಟನೆ ರಾಯಚೂರು ಜಿಲ್ಲೆಯ ಗುಂಜಳ್ಳಿ ಬಳಿ ನಡೆದಿದೆ.

ರಾಯಚೂರು-ಮಂತ್ರಾಲಯ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಆಯಿಲ್ ಟ್ಯಾಂಕರ್ ನಿಂದ ಮಿಥೇನ್ ಆಯಿಲ್ ಸೋರಿಕೆಯಾಗುತ್ತಿದ್ದು, ಸ್ಫೋಟಗೊಳ್ಳುವ ಆತಂಕ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ರಾಯಚೂರು-ಮಂತ್ರಾಲಯ ಹೆದ್ದಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಮಕ ಸಿಬ್ಬಂದಿ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular