ಮಡಿಕೇರಿ: ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 17ರ ಸಂಜೆ ಜೀವನದಿ ಕಾವೇರಿ ತೀರ್ಥರೂಪಿಣಿಯಾಗಿ ಆವೀರ್ಭವಿಸಲಿದ್ದಾಳೆ.
ಅಕ್ಟೋಬರ್ 17ರ ಶನಿವರ ಸಂಜೆ 7 ಗಂಟೆ 50 ನಿಮಿಷಕ್ಕೆ ಕಾವೇರಿ, ತೀರ್ಥರೂಪಿಣಿಯಾಗಿ ಉದ್ಭವಿಸಲಿದ್ದು, ಜೀವನದಿಯನ್ನ ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ತಲಕಾವೇರಿಗೆ ಆಗಮಿಸಲಿದ್ದಾರೆ.
ಕೋಟ್ಯಂತರ ಜನರ ಪಾಲಿಗೆ ದೈವಿ ಸ್ವರೂಪವಾಗಿರುವ ಕಾವೇರಿ ಕೇವಲ ನದಿಯ ನೀರಲ್ಲ ಅದೊಂದು ಶಕ್ತಿ ಸ್ವರೂಪಿಣಿ. ಅಗಸ್ತ್ಯ ಮುನಿಯ ಪತ್ನಿಯಾಗಿದ್ದ ಕಾವೇರಿ ಲೋಕಕಲ್ಯಾಣಕ್ಕಾಗಿ ನದಿಯಾಗಿ ಹರಿಯುತ್ತಾಳೆ. ತುಲಾ ಮಾಸದ ಮೊದಲ ದಿನ ಅಂದರೆ ಸೂರ್ಯ ಕನ್ಯಾ ರಾಶಿಯಿಂದ ತುಲಾ ರಾಶಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ತಲಕಾವೇರಿಯ ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ ಎಂಬುದು ನಂಬಿಕೆ.
ಈ ಪವಿತ್ರ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳಲು ದೇಶದ ಮೂಲೆಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ನಾಳೆ ಸಂಜೆ 7 ಗಂಟೆ 50 ನಿಮಿಷಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ರವಿರಾಜ್ ಆಚಾರ್, ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ.
ಉಚಿತ ಬಸ್ಗಳ ವ್ಯವಸ್ಥೆ:
ತಲಕಾವೇರಿಗೆ ತೆರಳಲು ಭಕ್ತರಿಗೆ ಅನುಕೂಲಕ್ಕಾಗಿ ಉಚಿತ ಕೆಎಸ್ಆರ್ಟಿಸಿ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಭಕ್ತರ ನಿಯಂತ್ರಣಕ್ಕೆ ದೇವಸ್ಥಾನದ ಆವರಣದಲ್ಲಿ ಬ್ಯಾರಿಕೇಡ್ಗಳನ್ನ ಅಳವಡಿಸಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಕಟ್ಟೆಚ್ಚರವಹಿಸಲಾಗಿದೆ.
ಭದ್ರತೆಗಾಗಿ ಕೆಎಸ್ಆರ್ಪಿ ಮತ್ತು ಡಿಎಆರ್ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾದೆ. ಭಕ್ತರಿಗೆ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. ಅಲ್ಲದೆ ಈ ಬಾರಿ ತೀರ್ಥ ತೆಗೆದುಕೊಂಡು ಹೋಗಲು ಪ್ಲಾಸ್ಟಿಕ್ ಬಿಂದಿಗೆ, ಬಾಟಲಿ ಡಬ್ಬಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಭಾಗಮಂಡಲದಿಂದ ಸಹಸ್ರಾರು ಭಕ್ತರು ತಲಕಾವೇರಿಗೆ ಪಾದಯಾತ್ರೆ ಮಾಡಲಿದ್ದಾರೆ. ಹಾಗಾಗಿ ರಸ್ತೆಯುದ್ಧಕ್ಕೂ ವಿದ್ಯುತ್ ದೀಪ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳ ಅವಧಿ 6 ತಿಂಗಳು ವಿಸ್ತರಣೆ: ಅಧಿಕೃತ ಆದೇಶ
ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯಿತಿಗಳಿಗೆ ಸದ್ಯಕ್ಕೆ ಚುನಾವಣೆ ನಡೆಯುತ್ತಿಲ್ಲ. ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಅವಧಿಯನ್ನು 6 ತಿಂಗಳು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಡಳಿತಾತ್ಮಕ ಕೆಲಸಗಳು ಮತ್ತು ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗದಂತೆ ತಡೆಯಲು, ಪಂಚಾಯಿತಿಗಳಿಗೆ ನೇಮಿಸಲಾಗಿದ್ದ ಆಡಳಿತಾಧಿಕಾರಿಗಳ ಅಧಿಕಾರಾವಧಿಯನ್ನು ಮುಂದಿನ 6 ತಿಂಗಳ ಕಾಲ ವಿಸ್ತರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕೃತ ಆದೇಶ ನೀಡಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ವತಿಯಿಂದ ನಿರ್ದೇಶನ ನೀಡಲಾಗಿದೆ. 2020 – 2025ರ ಸಾಲಿನಲ್ಲಿ ಚುನಾವಣೆ ನಡೆದು, ಐದು ವರ್ಷಗಳ ಆಡಳಿತಾವಧಿ ಮುಕ್ತಾಯಗೊಂಡಿದ್ದ ಗ್ರಾಮ ಪಂಚಾಯಿತಿಗಳಿಗೆ ಈ ಹಿಂದೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿತ್ತು. ಆದರೆ, ಪ್ರಸ್ತುತ ಈ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಗಳು ಇನ್ನೂ ನಡೆಯದ ಕಾರಣ ಹಾಗೂ ಹಲವು ಪಂಚಾಯಿತಿಗಳಲ್ಲಿ ಆಡಳಿತಾಧಿಕಾರಿಗಳ ಮೊದಲ 6 ತಿಂಗಳ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993′ ರ ಪ್ರಕರಣ 321ರ ಅನ್ವಯ ಸರ್ಕಾರಕ್ಕಿರುವ ಅಧಿಕಾರವನ್ನು ಚಲಾಯಿಸಿ, ಇದೇ ಕಾಯ್ದೆಯ ಪ್ರಕರಣ 8 (2)ರ ಪ್ರಕಾರ ಆಡಳಿತಾಧಿಕಾರಿಗಳ ಅಧಿಕಾರಾವಧಿಯನ್ನು ಮತ್ತೆ 6 ತಿಂಗಳು ಮುಂದುವರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

