HomeKarnatakaಸಾರಿಗೆ ಇಲಾಖೆಯಿಂದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಓಲಾ, ಉಬರ್ ಮಾದರಿಯಲ್ಲಿ ಆ್ಯಪ್

ಸಾರಿಗೆ ಇಲಾಖೆಯಿಂದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಓಲಾ, ಉಬರ್ ಮಾದರಿಯಲ್ಲಿ ಆ್ಯಪ್

ಬೆಂಗಳೂರು: ಖಾಸಗಿ ಆ್ಯಪ್ ಗಳಿಂದ ಜನಕ್ಕೆ ಆಗುತ್ತಿರುವ ತೊಂದರೆ ತಪ್ಪಿಸಲು ಸರ್ಕಾರದಿಂದಲೇ ಓಲಾ, ಉಬರ್ ಮಾದರಿ ಆ್ಯಪ್ ರಚಿಸಲಾಗುವುದು. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ.

ರಾಯಚೂರಿನಲ್ಲಿ ಕಲ್ಯಾಣ ರಥ ಸಾರಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಸಾರಿಗೆ ಇಲಾಖೆ ವತಿಯಿಂದಲೇ ಓಲಾ, ಉಬರ್ ಮಾದರಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಸಗಿ ಓಲಾ, ಉಬರ್ ಆ್ಯಪ್ ಗಳಿಂದ ಜನರಿಗೆ ತೊಂದರೆ ಆಗುತ್ತಿದೆ. ಈ ಕಿರಿಕಿರಿ ತಪ್ಪಿಸಲು ಸರ್ಕಾರದಿಂದಲೇ ಹೊಸ ಆ್ಯಪ್ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಟ್ಯಾಕ್ಸಿ ಚಾಲಕರ ಸಭೆಯಲ್ಲಿ ಹೊಸ ಆ್ಯಪ್ ಅಭಿವೃದ್ದಿ ಬಗ್ಗೆ ತಿಳಿಸಿದ್ದು, ಎಲ್ಲಾ ಪ್ರಯಾಣಿಕರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರಿಗೆ ಅನುಕೂಲವಾಗುತ್ತದೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಆ್ಯಪ್ ಸಿದ್ಧಪಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular