HomeLatest NewsBREAKING: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ

BREAKING: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರು: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣಮೂರ್ತಿ(81), ರಾಧಾ(74) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ಬೆಂಗಳೂರಿನ ಜೆಪಿ ನಗರದ ವೃದ್ಧಾಶ್ರಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಪಿ ನಗರದ ಎಂಟನೇ ಹಂತದ ಕಮಲಮ್ಮ ರಾಮಕೃಷ್ಣಪ್ಪ ವೃದ್ಧಾಶ್ರಮದಲ್ಲಿ ಘಟನೆ ನಡೆದಿದೆ. ಸೊಸೆಯ ಜೊತೆಗೆ ಹೊಂದಾಣಿಕೆ ಇಲ್ಲದ ಕಾರಣಕ್ಕೆ ದಂಪತಿ ವೃದ್ಧಾಶ್ರಮಕ್ಕೆ ಸೇರಿದ್ದರು.

ಮಗನಿಗೆ ಬೇರೆ ಮನೆ ಮಾಡಿಕೊಡಲು ತಂದೆ -ತಾಯಿ ಕೇಳಿದ್ದರು. 2021 ರಲ್ಲಿ ಬ್ಯಾಟರಾಯನಪುರದ ವೃದ್ಧಾಶ್ರಮಕ್ಕೆ ಸೇರಿಸಿದ್ದು, 2023ರಲ್ಲಿ ವಾಪಸ್ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಮನೆಯಲ್ಲಿ ಮತ್ತೆ ಹೊಂದಾಣಿಕೆಯಾಗಿರಲಿಲ್ಲ. ಹೀಗಾಗಿ ಕಳೆದ ತಿಂಗಳು ಮತ್ತೆ ವೃದ್ಧಾಶ್ರಮಕ್ಕೆ ಸೇರಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊನ್ನೆ ರಾತ್ರಿ ಊಟ ಮಾಡಿ ಮಲಗಲು ಹೋಗಿದ್ದ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿವಿ ನೋಡುವ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪ ಆಗಿತ್ತು ಎಂದು ವೃದ್ಧಾಶ್ರಮದವರು ಮಾಹಿತಿ ನೀಡಿದ್ದಾರೆ. ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular