ಚಿಕ್ಕಬಳ್ಳಾಪುರ: ವೃದ್ಧ ದಂಪತಿ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಪೋಲಂಪಲ್ಲಿ ಗ್ರಾಮದಲ್ಲಿ ನಡೆದಿದೆ.
ಜಂಗಾಲಹಳ್ಳಿ ಗ್ರಾಮದ ಅಶ್ವತ್ಥಪ್ಪ (70) ಹಾಗೂ ಹನುಮಕ್ಕ (65) ಆತ್ಮಹತ್ಯೆಫ಼ೆ ಶರಣಾದ ದಂಪತಿ. ಬೆಳಿಗ್ಗೆ ಮನೆಯಲ್ಲಿ ದಂಪತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ಪೊಲಿಸರುಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿ ಪರಿಶೀಲಿಸಿದಾಗ ದಂಪತಿ ಸಾವನ್ನಪ್ಪಿದ್ದರು. ಆರ್ಥಿಕ ಸಂಕಷ್ಟದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಗುಡಿಬಂಡೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
