HomeKarnatakaBIG NEWS: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್ ಪಡೆದ ವಿಚಾರ: ಬಿಜೆಪಿಯವರು ಹಿಂದೆ RSSನವರ...

BIG NEWS: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್ ಪಡೆದ ವಿಚಾರ: ಬಿಜೆಪಿಯವರು ಹಿಂದೆ RSSನವರ ಕೇಸ್ ಹಿಂಪಡೆದಿರಲಿಲ್ಲವೇ? ಸಿಎಂ ಪ್ರಶ್ನೆ

ಮೈಸೂರು: ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದ ಕೇಸ್ ಸರ್ಕಾರ ವಾಪಾಸ್ ಪಡೆದಿರುವ ವಿಚಾರವಾಗಿ ವಿಪಕ್ಷ ಬಿಜೆಪಿ ಹೋರಾಟಕ್ಕೆ ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹಿಂದೆ ಆರ್ ಎಸ್ ಎಸ್ ನವರ ಕೇಸ್ ಗಳನ್ನು ಹಿಂಪಡೆದಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿರುವ ಗೃಹ ಸಚಿವ ಡಾ.ಪರಮೇಶ್ವರ್ ಹಳೇ ಹುಬ್ಬಳ್ಳಿ ಗಲಭೆ ಕೇಸ್ ಬಗ್ಗೆ ತೀರ್ಮಾನಿಸಿ ಸಚಿವ ಸಂಪುಅ ಸಭೆಗೆ ತಂದಿದ್ದರು. ಅದನ್ನು ಸಂಪುಟ ಸಭೆ ಒಪ್ಪಿದೆ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗುತ್ತದೆ. ಕೋರ್ಟ್ ಒಪ್ಪಿದರೆ ಮಾತ್ರ ಕೇಸ್ ವಾಪಾಸ್ ಪಡೆಯಲು ಸಾಧ್ಯವಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular