HomeKarnatakaNPS To OPS: ಸರ್ಕಾರಿ ನೌಕರರಿಗೆ ಶೀಘ್ರವೇ ಗುಡ್ ನ್ಯೂಸ್

NPS To OPS: ಸರ್ಕಾರಿ ನೌಕರರಿಗೆ ಶೀಘ್ರವೇ ಗುಡ್ ನ್ಯೂಸ್

NPS to OPS  ಇದು ಕರ್ನಾಟಕದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾಗಿದೆ. ಹೊಸ ಪಿಂಚಣಿ ಯೋಜನೆ(NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಮರು ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ.

ಅಖಿಲ ಕರ್ನಾಟಕ NPS ನೌಕರರ ಸಂಘ, ಬೆಂಗಳೂರು ವತಿಯಿಂದ 2ನೇ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ದಾವಣಗೆರೆಯಲ್ಲಿ ಭಾನುವಾರ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪಾಲ್ಗೊಂಡಿದ್ದರು.

ಸಿ.ಎಸ್.ಷಡಾಕ್ಷರಿ ಅವರು NPS ನೌಕರರ ಸಂಘದ ಚಟುವಟಿಕೆಗಳಿಗೆ ತಮ್ಮ ಬೆಂಬಲ ಹಾಗೂ ಮಾರ್ಗದರ್ಶನವನ್ನು ನೀಡಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಸ್.ಬಸವರಾಜ, NPS ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗನಗೌಡ ಎಂ.ಎ.ಮುಂತಾದವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಕಾರಣಿ ಸಭೆಯ ನಿರ್ಣಯಗಳು

  • ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಎನ್‌ಪಿಎಸ್ ಸಂಘಟನೆ ಬಲವರ್ಧನೆ ಹಾಗೂ ಎನ್‌ಪಿಎಸ್ ಅಧ್ಯಯನ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲು ಒತ್ತಾಯ ಮಾಡುವುದು.
  • ಒಪಿಎಸ್‌ ಮರು ಜಾರಿಗಾಗಿ ಹೋರಾಟ ನಡೆಸುವುದು
  • ಬೆಂಗಳೂರು ಅರಮನೆ ಮೈದಾನದಲ್ಲಿ ಎನ್‌ಪಿಎಸ್‌ ನೌಕರರ ಸಮ್ಮೇಳನದಲ್ಲಿ ರಾಜ್ಯದ ನೌಕರರು  ಭಾಗವಹಿಸುವಂತೆ ಸಂಘಟನೆ ಮಾಡುವುದು
  • ಒಪಿಎಸ್ ಜಾರಿ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘ ಕೈಗೊಳ್ಳುವ ನಿರ್ಣಯವನ್ನು ಬೆಂಬಲಿಸುವುದು
  • ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಮುಂದಿನ ರಾಜ್ಯ ಕಾರ್ಯಕಾರಣಿ ಸಭೆ ಆಯೋಜನೆ

ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಎನ್‌ಪಿಎಸ್ ನೌಕರರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ನಿರಂತರವಾಗಿ ಹೋರಾಟವನ್ನು ನಡೆಸುತ್ತಿದೆ.

ಎನ್‌ಪಿಎಸ್ ನೌಕರರ ಸಂಘದ ಸಭೆಯಲ್ಲಿ ಪಾಲ್ಗೊಂಡಿದ್ದ ಸಿ.ಎಸ್.ಷಡಾಕ್ಷರಿ ಅವರು ಸಹ, “ ನಮ್ಮ ಹೋರಾಟ ಕೇವಲ ಸಾಂಕೇತಿಕವಲ್ಲ. ಇಡೀ ವ್ಯವಸ್ಥೆ ಸ್ಥಬ್ತಗೊಳಿಸುವ ಕರ್ನಾಟಕ ಬಂದ್ ಮಾದರಿಯಲ್ಲಿ ನಡೆಯಲಿದೆ” ಎಂದು ಹೇಳಿದ್ದಾರೆ.

ಒಪಿಎಸ್ ಮರು ಜಾರಿಗೊಳಿಸಲು ವರದಿ ನೀಡಲು ಕರ್ನಾಟಕ ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ. ಡಿಸೆಂಬರ್ 22ರಂದು ಈ ಸಮಿತಿ ಜೊತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗ ಸಭೆಯನ್ನು ನಡೆಸಿತ್ತು. ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಮರು ಜಾರಿಗೊಳಿಸಿದರೆ ಆಗುವ ಪರಿಣಾಮಗಳ ಕುರಿತು ಅಂಕಿ ಅಂಶಗಳ ಸಮೇತ ಸಂಘ ಸಮಿತಿಗೆ ವರದಿ ನೀಡಿದೆ.

ಕರ್ನಾಟಕ ಸರ್ಕಾರ 1/4/2006ರ ನಂತರ ಎನ್‌ಪಿಎಸ್ ಜಾರಿಗೊಳಿಸಿದೆ. ಪಶ್ಚಿಮ ಬಂಗಾಳ ರಾಜ್ಯ ಇನ್ನೂ ಸಹ ಎನ್‌ಪಿಎಸ್ ಜಾರಿಗೆ ತಂದಿಲ್ಲ. ರಾಜ್ಯದಲ್ಲಿ ಕೇಂದ್ರ ಸೇವೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಸರ್ಕಾರಿ ನೌಕರರು ಮಾತ್ರ ಅಲ್ಲಿ ಎನ್‌ಪಿಎಸ್ ವ್ಯಾಪ್ತಿಯಲ್ಲಿದ್ದಾರೆ.

ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಎನ್‌ಪಿಎಸ್ ಬದಲಾಗಿ CPS ಎಂಬ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ವಿವಿಧ ರಾಜ್ಯಗಳಲ್ಲಿ ಎನ್‌ಪಿಎಸ್ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ, ಈ ರಾಜ್ಯಗಳಲ್ಲಿ ಕರ್ನಾಟಕ ಸಹ ಒಂದು.

ರಾಜಸ್ಥಾನ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಪಂಜಾಬ್, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳು ಎನ್‌ಪಿಎಸ್ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಮಾಡಿವೆ. ಜಾರ್ಖಂಡ್ ರಾಜ್ಯ ಒಪಿಎಸ್ ಮರು ಜಾರಿ ಮಾಡುತ್ತೇವೆ ಎಂದು ಈಗಾಗಲೇ ಘೋಷಣೆ ಮಾಡಿದೆ.

ಕರ್ನಾಟಕ ಸರ್ಕಾರ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಮರು ಜಾರಿಗೊಳಿಸಲು ಸಮಿತಿ ವರದಿ ನೀಡುವುದಕ್ಕೆ ಕಾಯುತ್ತಿದೆ. ಕರ್ನಾಟಕದ ಕಾಂಗ್ರೆಸ್ ಪಕ್ಷ 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಒಪಿಎಸ್ ಮರು ಜಾರಿ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರಿಗೆ ಭರವಸೆ ನೀಡಿತ್ತು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular