ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರಾಯ್ ಅವರ ಕುಟುಂಬದವರನ್ನು ಸಂಪರ್ಕ ಮಾಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಅವರೇ ಶೂಟ್ ಮಾಡಿಕೊಂಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಆತ್ಮಹತ್ಯೆ ಬಗ್ಗೆ ತನಿಖೆ ನಡೆಸುತ್ತೇವೆ. ಐಟಿ ತಂಡದ ಜೊತೆಗೆ ನಮ್ಮ ಪೊಲೀಸರು ಸಂಪರ್ಕದಲ್ಲಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಳ್ಳಲಾಗುತ್ತಿದೆ. ರಾಯ್ ಅವರ ಕಚೇರಿಯಲ್ಲಿ ಐಟಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಕೇರಳದ ಐಟಿಯವರು ಬೆಂಗಳೂರಿನಲ್ಲಿ ತನಿಖೆ ಮಾಡುತ್ತಿದ್ದರು. ಅವರು ಏಕೆ ಬಂದಿದ್ದರು ಎಂಬುದು ಗೊತ್ತಿಲ್ಲ. ಇದೀಗ ಮೇಲ್ನೋಟಕ್ಕೆ ಫೈರಿಂಗ್ ಮಾಡಿಕೊಂಡಿದ್ದಾರೆ ಎಂಬುದು ಕಂಡು ಬಂದಿದೆ ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

