ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ. ಸ್ಪೇನ್ ವಿರುದ್ಧ 2-1 ಗೋಲುಗಳಿಂದ ಭಾರತ ತಂಡ ಗೆಲುವು ಸಾಧಿಸಿದೆ.
ನಾಯಕ ಹರ್ಮನ್ ಪ್ರೀತ್ ಸಿಂಗ್ ಎರಡು ಗೋಲು ಗಳಿಸಿದ್ದಾರೆ. ಭಾರತ ಹಾಕಿ ತಂಡ ಸತತ ಎರಡು ಒಲಿಂಪಿಕ್ಸ್ ನಲ್ಲಿ ಕಂಚು ಗೆದ್ದಿದೆ. ಟೋಕಿಯೋ ಒಲಿಂಪಿಕ್ಸ್ ನಲ್ಲಿಯೂ ಭಾರತ ತಂಡ ಕಂಚಿನ ಪದಕ ಗೆದ್ದಿತ್ತು.
ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಹಾಕಿ ಸ್ಪರ್ಧೆಯಲ್ಲಿ ಭಾರತವು ಸ್ಪೇನ್ ಅನ್ನು ಕ್ಲಿಫ್‌ಹ್ಯಾಂಗರ್‌ನಲ್ಲಿ 2-1 ಗೋಲುಗಳಿಂದ ಸೋಲಿಸಿ ಕಂಚಿನ ಪದಕವನ್ನು ಗೆದ್ದುಕೊಂಡಿತು. ತಮ್ಮ ದಂತಕಥೆ ಗೋಲ್‌ಕೀಪರ್ ಪಿ.ಆರ್. ಶ್ರೀಜೇಶ್‌ಗೆ ಸ್ಮರಣೀಯ ವಿದಾಯವನ್ನು ನೀಡಿತು. ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಗೆದ್ದಿದ್ದ ಕಂಚಿನ ಪದಕವನ್ನು ಉಳಿಸಿಕೊಳ್ಳಲು ಎರಡು ಗೋಲುಗಳನ್ನು ಗಳಿಸುವ ಮೂಲಕ ತಂಡಕ್ಕೆ ಅರ್ಹ ನಾಯಕರಾಗಿ ಹೊರಹೊಮ್ಮಿದರು.
Paris Olympics 2024 | Indian Men's Hockey Team wins Bronze medal, beats Spain 2-1. #OlympicGames #Paris2024 pic.twitter.com/Arkxg8TuLF
— ANI (@ANI) August 8, 2024