HomeEntertainmentಅನಾರೋಗ್ಯದ ಕಾರಣ ಬಿಗ್ ಬಾಸ್ ಮನೆಯಿಂದ ಹೊರಬಂದ ಓಂ ಪ್ರಕಾಶ್ ರಾವ್

ಅನಾರೋಗ್ಯದ ಕಾರಣ ಬಿಗ್ ಬಾಸ್ ಮನೆಯಿಂದ ಹೊರಬಂದ ಓಂ ಪ್ರಕಾಶ್ ರಾವ್

ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಅನಾರೋಗ್ಯದ ಕಾರಣ ಬಿಗ್ ಬಾಸ್ ಕನ್ನಡ ಸೀಸನ್ 13ರಿಂದ ಹೊರಬಂದಿದ್ದಾರೆ. ಸೆಪ್ಟೆಂಬರ್ 14ರ ಸಂಜೆ ಅವರ ಆರೋಗ್ಯದ ಬಗ್ಗೆ ಹಲವು ಸುದ್ದಿಗಳು ಹರಿದಾಡಿದ್ದವು. ಇದೀಗ ಕಲರ್ಸ್ ಕನ್ನಡ ವಾಹಿನಿ ಓಂ ಪ್ರಕಾಶ್ ರಾವ್ ಅವರು ಶೋನಿಂದ ಹೊರಬಂದಿರುವುದನ್ನು ಅಧಿಕೃತವಾಗಿ ಘೋಷಿಸಿದೆ.

ಬಿಗ್ ಬಾಸ್ ಮನೆಗೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಓಂ ಪ್ರಕಾಶ್ ರಾವ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕಾಲು ನೋವು ಹಾಗೂ ಊತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಚಿಕಿತ್ಸೆ ಪಡೆದು ಮತ್ತೆ ಬಿಗ್ ಬಾಸ್ ಮನೆಗೆ ಮರಳುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಆರೋಗ್ಯದ ದೃಷ್ಟಿಯಿಂದ ಅವರು ಕಾರ್ಯಕ್ರಮದಿಂದ ಹೊರಬರುವ ನಿರ್ಧಾರ ಮಾಡಿದ್ದಾರೆ.

ಫ್ಲೈಟ್ ಟಾಸ್ಕ್‌ ಬಳಿಕ ಆರೋಗ್ಯದಲ್ಲಿ ಸಮಸ್ಯೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ಬಿಗ್ ಬಾಸ್ ಮನೆಯಲ್ಲಿನ ಫ್ಲೈಟ್ ಟಾಸ್ಕ್‌ ಕೂಡ ಓಂ ಪ್ರಕಾಶ್ ರಾವ್ ಅವರಿಗೆ ಸವಾಲಾಗಿತ್ತು. ಮನೆಯೊಳಗಿನ ಕಿರಿದಾದ ಜಾಗದಲ್ಲಿ ಉಳಿಯುವುದು ಅವರಿಗೆ ಕಷ್ಟವಾಗಿತ್ತು. ನಿರಂತರವಾಗಿ ಅಲ್ಲಿ ಇರುವುದರಿಂದ ಕಾಲಿನಲ್ಲಿ ಊತ ಮತ್ತು ನೋವು ಕಾಣಿಸಿಕೊಂಡಿತ್ತು.

ಇದರ ನಡುವೆ ಫುಡ್ ಟಾಸ್ಕ್‌ನಲ್ಲಿ ಹೆಚ್ಚು ಖಾರ ಹಾಗೂ ಉಪ್ಪು ಇರುವ ಪದಾರ್ಥಗಳನ್ನು ಸೇವಿಸಿದ್ದರಿಂದ ಅವರಿಗೆ ವಾಂತಿ ಕೂಡ ಆಗಿತ್ತು. ಬಳಿಕ ಹೊಟ್ಟೆಯ ಸಮಸ್ಯೆಯೂ ಕಾಣಿಸಿಕೊಂಡಿತ್ತು.

ಆಸ್ಪತ್ರೆಗೆ ದಾಖಲಿಸಿದ್ದ ಬಿಗ್ ಬಾಸ್ ತಂಡ

ಪ್ರಥಮಾ ಪ್ರಸಾದ್ ಎಲಿಮಿನೇಟ್ ಆದ ಬಳಿಕ ಸ್ಪರ್ಧಿಗಳು ಮತ್ತೆ ಬಿಗ್ ಬಾಸ್ ಮನೆಗೆ ಮರಳಿದ್ದರು. ಆದರೆ ಓಂ ಪ್ರಕಾಶ್ ರಾವ್ ಅವರಿಗೆ ಒಂದು ದಿನದಲ್ಲೇ ಆರೋಗ್ಯ ಸಮಸ್ಯೆ ಎದುರಾಗಿದೆ. ತಕ್ಷಣವೇ ಬಿಗ್ ಬಾಸ್ ತಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿತ್ತು.

ಈ ಹಿಂದೆ ಕೂಡ ಕೆಲ ಸ್ಪರ್ಧಿಗಳು ಅನಾರೋಗ್ಯದ ಕಾರಣ ಬಿಗ್ ಬಾಸ್ ಮನೆಯಿಂದ ತಾತ್ಕಾಲಿಕವಾಗಿ ಹೊರಬಂದು ಚಿಕಿತ್ಸೆ ಪಡೆದು ಮತ್ತೆ ಕಾರ್ಯಕ್ರಮಕ್ಕೆ ಮರಳಿದ್ದರು. ಆದರೆ ಓಂ ಪ್ರಕಾಶ್ ರಾವ್ ಅವರ ವಿಚಾರದಲ್ಲಿ ಪರಿಸ್ಥಿತಿ ಭಿನ್ನವಾಗಿದೆ. ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಅವರು ಕಾರ್ಯಕ್ರಮಕ್ಕೆ ಮರಳದಿರಲು ನಿರ್ಧರಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಓಂ ಪ್ರಕಾಶ್ ರಾವ್ ಅವರು ಹೆಚ್ಚು ಸಮಯ ಕಾಣಿಸಿಕೊಂಡಿರಲಿಲ್ಲ. ಆದರೂ ಕಿರಿಯ ಸ್ಪರ್ಧಿಗಳೊಂದಿಗೆ ಮಾತನಾಡುತ್ತಾ, ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ ಅವರಿಗೆ ಮಾರ್ಗದರ್ಶನ ನೀಡುತ್ತಿದ್ದರು.ಇದೀಗ ಅವರು ಕಾರ್ಯಕ್ರಮದಿಂದ ಹೊರಬಂದಿರುವುದು ಸಹ ಸ್ಪರ್ಧಿಗಳಿಗೆ ಹಾಗೂ ಬಿಗ್ ಬಾಸ್ ವೀಕ್ಷಕರಿಗೆ ಬೇಸರ ಮೂಡಿಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular