OMG : ಪತಿಯೊಂದಿಗೆ ಜಗಳವಾಡಿ ‘ವಿದ್ಯುತ್ ಟವರ್’ ಏರಿದ ಪತ್ನಿ : ಪ್ರಾಣ ಪಣಕ್ಕಿಟ್ಟು ಕಾಪಾಡಿದ ಕಾನ್ಸ್ಟೇಬಲ್ |WATCH VIDEO

ಮಹಿಳೆಯೊಬ್ಬಳು ಹೈಟೆನ್ಷನ್ ವಿದ್ಯುತ್ ಟವರ್ ಏರಿದ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ.

ಮಹಿಳೆ ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ, ಧೈರ್ಯಶಾಲಿ ಪೊಲೀಸ್ ಅಧಿಕಾರಿಯೊಬ್ಬರು ಟವರ್ ಹತ್ತಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಮಹಿಳೆಯನ್ನು ರಕ್ಷಿಸಿದ್ದಾರೆ. ಈ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಮತ್ತು ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದೆ.
ವರದಿಗಳ ಪ್ರಕಾರ, ಲಾಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಛತಾರಾ ಗ್ರಾಮದಲ್ಲಿ ಪತಿಯೊಂದಿಗೆ ಜಗಳವಾಡಿದ ಮಹಿಳೆ ವಿದ್ಯುತ್ ಟವರ್ ಏರಿದ್ದಾರೆ.

ಮಹಿಳೆಯನ್ನು ಕಾಪಾಡಿದ ಪೊಲೀಸ್ ಪೇದೆಯನ್ನು ರಾಹುಲ್ ಸಿಂಗ್ ಎಂದು ಗುರುತಿಸಲಾಗಿದೆ. ಕಾನ್ಸ್ಟೇಬಲ್ ಧೈರ್ಯಕ್ಕೆ ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read