ಮಂಗಳೂರು: ‘ಪೋಸ್ಟ್ ಕಾರ್ಡ್’ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗಡೆ ಅವರನ್ನು ಬಂಧಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ ಕೋಮು ಪ್ರಚೋದನೆ ಆರೋಪದಡಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಮಹೇಶ್ ವಿಕ್ರಂ ಹೆಗಡೆ ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಡಬಿದರೆ ಪಿಎಸ್ಐ ಕೃಷ್ಣಪ್ಪ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರ ಆದೇಶದಂತೆ ಕೇಸ್ ದಾಖಲಿಸಿಕೊಂಡ ಪೊಲೀಸರು ಮಹೇಶ್ ವಿಕ್ರಂ ಹೆಗಡೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸೋಮವಾರದವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.